Home ಮುಖಪುಟ ಸುದ್ದಿ ಸಾಕ್ಷಿಗೆ ಜೀವ ಬೆದರಿಕೆ ನಟ ದರ್ಶನ್ ಮೂವರು ಅಭಿಮಾನಿಗಳ ಸೆರೆ

ಸಾಕ್ಷಿಗೆ ಜೀವ ಬೆದರಿಕೆ ನಟ ದರ್ಶನ್ ಮೂವರು ಅಭಿಮಾನಿಗಳ ಸೆರೆ

ರೇಣುಕಾಸ್ವಾಮಿ ಕೊಲೆ ಪ್ರಕರಣ

ಬೆಂಗಳೂರು,ಜು.೨-ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅವರ ಮೂವರು ಅಭಿಮಾನಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.


ಪ್ರಕರಣದ ಪ್ರಮುಖ ಸಾಕ್ಷಿದಾರ ಸಂದೀಪ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ದರ್ಶನ್ ಅಭಿಮಾನಿಗಳಾದ ಪುನೀತ್, ವೇಣು ಮತ್ತು ಸುಹಾಸ್ ನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರ ಸಂದೀಪ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಕಾರ್ಯಪ್ರವೃತ್ತರಾದ ಪೊಲೀಸರು, ಸಂದೀಪ್ ಅವರಿಗೆ ಸಾಕ್ಷಿ ನುಡಿಯದಂತೆ ಬೆದರಿಕೆ ಹಾಕಿದ್ದ ಪುನೀತ್, ವೇಣು, ಸುಹಾಸ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಬಂಧಿತ ಪುನೀತ್, ಪುನೀತ್ ಎನ್ನುವವನು ಸಾಮಾಜಿಕ ಜಾಲತಾಣದಲ್ಲಿ ಡಿ-ಕಂಪನಿ ಎನ್ನುವ ಖಾತೆಯನ್ನು ಹ್ಯಾಂಡಲ್ ಮಾಡುತ್ತಿದ್ದನು. ಉಳಿದಂತೆ ಸುಹಾಸ್ ಮತ್ತು ವೇಣು ಎನ್ನುವ ಇಬ್ಬರು ತುಮಕೂರಿನ ದರ್ಶನ್ ಅಭಿಮಾನಿಗಳ ಸಂಘದ ಪ್ರಮುಖರಾಗಿದ್ದಾರೆ.


ನ್ಯಾಯಯುತ ತನಿಖೆಗೆ ಅಡ್ಡಿಪಡಿಸುವ ಪ್ರಯತ್ನ ಇದಾಗಿದೆ ಎಂದು ಹೇಳಲಾಗಿದೆ. ಈ ಬಂಧನವು ಪ್ರಕರಣದ ತನಿಖೆಗೆ ಹೊಸ ಆಯಾಮವನ್ನು ತಂದಿದ್ದು,ಅಭಿಮಾನಿಗಳ ಈ ಕೃತ್ಯವು ಈಗಾಗಲೇ ಸಂಕಷ್ಟದಲ್ಲಿರುವ ದರ್ಶನ್‌ಗೆ ಮತ್ತಷ್ಟು ಕಾನೂನು ತೊಡಕುಗಳನ್ನು ಸೃಷ್ಟಿಸಿದೆ.


ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ಸಂದೀಪ್ ರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲಿಯೇ ಕಾಪಾಕ್ಷಿಪಾಳ್ಯ ಠಾಣೆ ಪೊಲೀಸರು ಸಾಕ್ಷಿಗೆ ಬೆದರಿಕೆ ಹಾಕಿದ ಮೂವರು ದರ್ಶನ್ ಅಭಿಮಾನಿಗಳನ್ನು ಬಂಧಿಸಿದ್ದಾರೆ.


ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ ಪ್ರಕರಣ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಮತ್ತಷ್ಟು ಗಂಭೀರವಾಗಿ ತೆಗೆದುಕೊಂಡ ಸರ್ಕಾರ ಸಾಕ್ಷಿಗೆ ಬೆದರಿಕೆ ಹಾಕಿದ್ದ ಸುಹಾಸ್, ವೇಣು ಮತ್ತು ಪುನೀತ್ ಅವರ ಮೇಲೆ ಎಫ್‌ಐಆರ್ ದಾಖಲಿಸಿತ್ತು.


ನಂತರ ತನಿಖೆಗಿಳಿದ ಕಾಮಾಕ್ಷಿಪಾಳ್ಯ ಪೊಲೀಸರು ಬೆದರಿಕೆ ಹಾಕಿದವರ ಹಿನ್ನೆಲೆಯನ್ನು ಪತ್ತೆ ಮಾಡಿದಾಗ ಪುನೀತ್ ಎನ್ನುವವನು ಸಾಮಾಜಿಕ ಜಾಲತಾಣದಲ್ಲಿ ಡಿ-ಕಂಪನಿ ಎನ್ನುವ ಖಾತೆಯನ್ನು ಹ್ಯಾಂಡಲ್ ಮಾಡುತ್ತಿದ್ದನು. ಉಳಿದಂತೆ ಸುಹಾಸ್ ಮತ್ತು ವೇಣು ಎನ್ನುವ ಇಬ್ಬರು ತುಮಕೂರಿನ ದರ್ಶನ್ ಅಭಿಮಾನಿಗಳ ಸಂಘದ ಪ್ರಮುಖರಾಗಿದ್ದಾರೆ.