Home ಜಿಲ್ಲೆ ಮೈಸೂರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಚಾಲನೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಪರಿಶೀಲನೆ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಚಾಲನೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಪರಿಶೀಲನೆ

ಸಂಜೆವಾಣಿ ನ್ಯೂಸ್
ಮೈಸೂರು: ಜು.02:-
ಮೈಸೂರು ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Sಠಿeಛಿiಚಿಟ Iಟಿಣeಟಿsive ಖevisioಟಿ – SIಖ) ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.


ಈ ಸಂಬಂಧ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಸೆಲ್ವಕುಮಾರ್ ಅವರು ಇಂದು ಜಿಲ್ಲೆಗೆ ಭೇಟಿ ನೀಡಿದರು. ಜಿಲ್ಲಾಧಿಕಾರಿಗಳು ಹಾಗೂ ಮತದಾರರ ನೋಂದಣಾಧಿಕಾರಿಗಳಿಂದ ಪ್ರಸ್ತುತ ಹಂತದ ಗಣಿಕೆ ನಮೂನೆ (ಇಟಿumeಡಿಚಿಣioಟಿ ಈoಡಿm – ಇಈ) ಗಳನ್ನು ಮತದಾರರಿಗೆ ಹಂಚಿಕೆ ಮಾಡುವ ಕಾರ್ಯದ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶ್ರೀ ಸೆಲ್ವಕುಮಾರ್ ಅವರು ಖಡಕ್ ಸೂಚನೆ ನೀಡಿದರು.


ಇದೇ ವೇಳೆ, 217-ಚಾಮರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 06, ಗೋಕುಲಂ ಪ್ರದೇಶಕ್ಕೆ ಖುದ್ದಾಗಿ ಭೇಟಿ ನೀಡಿದ ಅವರು, ಮನೆ-ಮನೆಗೆ ತೆರಳಿ ಗಣಿಕೆ ನಮೂನೆಗಳನ್ನು ವಿತರಣೆ ಮಾಡುತ್ತಿರುವ ಕಾರ್ಯವನ್ನು ಸ್ಥಳದಲ್ಲಿಯೇ ಪರಿಶೀಲಿಸಿದರು. ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀ ಲಕ್ಷ್ಮೀಕಾಂತ್ ರೆಡ್ಡಿ, ಮೈಸೂರು ಮಹಾನಗರಪಾಲಿಕೆಯ ಉಪ ಆಯುಕ್ತರು, ವಲಯ ಆಯುಕ್ತರು, ಕಂದಾಯ ಇಲಾಖೆಯ ಸಿಬ್ಬಂದಿ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.