Home ಕ್ರೈಂ ಸುದ್ದಿಗಳು ಟಿಪ್ಪರ್ ಕಾರ ನಡುವೆ ಅಪಘಾತ : ಕೊಲ್ಹಾರ ಸೇತುವೆ ಮೇಲಿಂದ ಕೃಷ್ಣಾ ನದಿಗೆ ಬಿದ್ದ ಟಿಪ್ಪರ್

ಟಿಪ್ಪರ್ ಕಾರ ನಡುವೆ ಅಪಘಾತ : ಕೊಲ್ಹಾರ ಸೇತುವೆ ಮೇಲಿಂದ ಕೃಷ್ಣಾ ನದಿಗೆ ಬಿದ್ದ ಟಿಪ್ಪರ್

ಕೊಲ್ಹಾರ :ಜು.2:ರಾಷ್ಟ್ರೀಯ ಹೆದ್ದಾರಿ 52ರ ಮಾರ್ಗವಾಗಿ ಬಾಗಲಕೋಟೆ ಜಿಲ್ಲೆಯ ಬೀಳಗಿಯಿಂದ ಕೊಲ್ಹಾರದತ್ತ ಬರುತ್ತಿದ್ದ ಟಿಪ್ಪರ್ ಮತ್ತು ಕಾರಿನ ನಡುವೆ ಓವರ್‍ಟೇಕ್ ಮಾಡುವ ವೇಳೆ ಡಿಕ್ಕಿ ಸಂಭವಿಸಿ ನಿಯಂತ್ರಣ ತಪ್ಪಿದ ಟಿಪ್ಪರ್ ಕೊಲ್ಹಾರ ಸೇತುವೆ ಮೇಲಿಂದ ಕೃಷ್ಣಾ ನದಿಗೆ ಉರುಳಿರುವ ಘಟನೆ ಬುಧವಾರ ಮಧ್ಯಾಹ್ನ ಜರುಗಿದೆ.

ಟಿಪ್ಪರ್ ಚಾಲಕ ಸಂತೋಷ ಕೋಟಿ, ಬಾಗಲಕೋಟೆ ಜಿಲ್ಲೆಯ ಬೆಣ್ಣೂರ ಗ್ರಾಮದ ನಿವಾಸಿಯಾಗಿದ್ದು, ಅವರು ಟಿಪ್ಪರ್ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅದೆ ಟಿಪ್ಪರ್‍ನಲ್ಲಿದ್ದ ಕ್ಲೀನರ್ ಸಂಜು ಮೂಲಗಿ (28), ಬೀದರ್ ಜಿಲ್ಲೆಯ ಯರಣಗಿ ಗ್ರಾಮದ ನಿವಾಸಿಯಾಗಿದ್ದು, ನದಿಯಲ್ಲಿ ಮುಳುಗಿದ ಟಿಪ್ಪರ್ ಮೇಲೆಯೇ ಕುಳಿತುಕೊಂಡು ರಕ್ಷಣೆಗಾಗಿ ಮೊರೆ ಇಟ್ಟಿದ್ದಾನೆ. ನಂತರ ಸ್ಥಳೀಯ ಮೀನುಗಾರರು ತೆಪ್ಪದ ಮೂಲಕ ತೆರಳಿ ಸಂಜುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.ಘಟನಾ ಸ್ಥಳಕ್ಕೆ ಪೆÇಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಚಾಲಕನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಅಪಘಾತಕ್ಕೀಡಾದ ಕಾರಿನ ನೋಂದಣಿ ಸಂಖ್ಯೆ ಏಂ 02 ಂಊ 2275 ಆಗಿದ್ದು, ಘಟನೆ ಬಳಿಕ ಕಾರಿನ ಚಾಲಕ ಹಾಗೂ ಇತರರು ವಾಹನವನ್ನು ಸ್ಥಳದಲ್ಲೇ ಬಿಟ್ಟು ತೆರಳಿರುವ ಮಾಹಿತಿ ಲಭ್ಯವಾಗಿದೆ.
ಘಟನೆಯಿಂದ ಸೇತುವೆ ಮೇಲೆ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಬೀಳಗಿ ಹಾಗೂ ಕೊಲ್ಹಾರ ಪೆÇಲೀಸರು ಅಪಘಾತಕ್ಕೀಡಾದ ಕಾರನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದ್ದಾರೆ