
ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.03:- ಶಾಲೆಗಳಲ್ಲಿ ಮಾತ್ರವಲ್ಲದೆ ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೆÇೀಷಿಸುವ ಜವಾಬ್ದಾರಿ ವಹಿಸಬೇಕು ಎಂದು ಬಸವರಾಜೇಂದ್ರ ಆಸ್ಪತ್ರೆಯ ಮುಖ್ಯಸ್ಥ ಖ್ಯಾತ ವ್ಯೆದ್ಯ ಡಾ. ಬಸವರಾಜೇಂದ್ರ ಕರೆ ನೀಡಿದರು.
ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯವು ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಚರಿಸಲಾಗುತ್ತಿರುವ ಸಹಕಾರ ಸಪ್ತಾಹ ಅಂಗವಾಗಿ ಚಾಮರಾಜನಗರ ಜಿಲ್ಲಾ ಸೌಹಾರ್ದ ಸಹಕಾರಿಗಳ ವತಿಯಿಂದ ನಗರದ ಸರ್ಕಾರಿ ಪಿ.ಡಬ್ಲ್ಯೂ.ಡಿ. ಶಾಲೆಯಲ್ಲಿ ಗುರುವಾರ ಗಿಡ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಮಾತ್ರವಲ್ಲದೆ ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೆÇೀಷಣೆ ಮಾಡುವ ಜವಾಬ್ದಾರಿ ವಹಿಸಬೇಕು ಹಾಗೂ ಕಾಡನ್ನು ಕಾಡಾಗಿಯೇ ಉಳಿಸಿ, ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಿದರೆ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಬಹುದು ಎಂದು ಹೇಳಿದರು.
ನಗರದ ಸರ್ಕಾರಿ ಪಿಡಬ್ಲ್ಯೂಡಿ ಶಾಲೆಯನ್ನು ದತ್ತು ಪಡೆದಿರುವ ಶಾಲೆಯ ಆವರಣದಲ್ಲಿ ಡಾ. ಬಸವರಾಜೇಂದ್ರ ಹಾಗೂ ಅವರ ಪತ್ನಿ ಶ್ವೇತಾ ಶಶಿಧರ್, ಗುರುಪ್ರಸಾದ್ ಬಂಗೇರ ಪ್ರಾಂತ್ಯ ಅಧಿಕಾರಿ ಇವರುಗಳು ಗಿಡ ನೆಟ್ಟು, ನೆರವೇರಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮೈಸೂರು ಪ್ರಾಂತ್ಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಸಹಕಾರ ಸಚಿವಾಲಯ ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಸಹಕಾರ ಸಪ್ತಾಹ ಆಚರಿಸಲಾಗುತ್ತಿದ್ದು, ಅದರ ಅಂಗವಾಗಿ ಪರಿಸರ ಸಂರಕ್ಷಣೆಯ ಉದ್ದೇಶದಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಅಭಿಯಾನಕ್ಕೆ ಮೈಸೂರು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು,
ಇದೀಗ ಚಾಮರಾಜನಗರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಸಂರಕ್ಷಿಸುವುದರಿಂದ ಜಾಗತಿಕ ತಾಪಮಾನ ಏರಿಕೆಯನ್ನು ನಿಯಂತ್ರಿಸಲು ನೆರವಾಗಲಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ದೇಶಿತ ಚಾಮರಾಜನಗರ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಮುಖ್ಯ ಪ್ರವರ್ತಕರಾದ ವೀರಭದ್ರಸ್ವಾಮಿ, ಸೌಹಾರ್ದ ಸಹಕಾರಿ ಸಂಘಗಳು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗದೆ ಪರಿಸರ ಸಂರಕ್ಷಣೆ ಸೇರಿದಂತೆ ಸಾಮಾಜಿಕ ಕಾರ್ಯಕ್ರಮಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸಹಕಾರ ಸಂಘಗಳು ಜನರ ಆರ್ಥಿಕ ಅಭಿವೃದ್ಧಿಯ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದರು.
“ಸಹಕಾರದಿಂದ ಸಮೃದ್ಧಿ” ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಸುಸ್ಥಿರ ಅಭಿವೃದ್ಧಿಗೆ ಸಹಕಾರ ಸಂಘಗಳ ಪಾತ್ರದ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಸೌಹಾರ್ದ ಸಹಕಾರಿಗಳ ಪ್ರತಿನಿಧಿಗಳಾದ ಬಾಲಸುಬ್ರಹ್ಮಣ್ಯ, ನಂಜುಂಡಸ್ವಾಮಿ, ಮಲ್ಲಿಕಾರ್ಜುನಸ್ವಾಮಿ, ಮಹದೇವಸ್ವಾಮಿ ಬಾಬು, ಮಹದೇವಸ್ವಾಮಿ (ರೇನಾ), ಸ್ನೇಹ ಜ್ಯೋತಿ ಮಹಿಳಾ ಸೌಹಾರ್ದ ಮಂಜುಳಾ, ಜೋಸೆಫ್, ಮುತ್ತುರಾಜ್, ಪ್ರಸನ್ನ ಕುಮಾರ್, ಕವಿತಾ, ರಾಜೇಂದ್ರ, ಹಾಗೂ ಚಾಮರಾಜನಗರ ಜಿಲ್ಲೆಯ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು ಹಾಗೂ ಚಾಮರಾಜನಗರ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ಬಲರಾಮ್. ಎನ್, ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



























