Home ಜಿಲ್ಲೆ ದೇವದುರ್ಗ ದುರಂತ ಸ್ಥಳಕ್ಕೆ ಸಂಸದ ಜಿ. ಕುಮಾರ ನಾಯಕ ಭೇಟಿ

ದೇವದುರ್ಗ ದುರಂತ ಸ್ಥಳಕ್ಕೆ ಸಂಸದ ಜಿ. ಕುಮಾರ ನಾಯಕ ಭೇಟಿ

ಯಾದಗಿರಿ:ಜು.3:ದೇವದುರ್ಗ ಪಟ್ಟಣದಲ್ಲಿ ಕಟ್ಟಡದ ಮೇಲ್ಚಾವಣಿ ಕುಸಿದು ಮೂವರು ಯುವಕರು ಮೃತಪಟ್ಟ ದುರಂತ ಸ್ಥಳಕ್ಕೆ ಸಂಸದ ಜಿ. ಕುಮಾರ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನಾ ಸ್ಥಳದಲ್ಲಿ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಅವರು, ದುರಂತಕ್ಕೆ ಕಾರಣವಾದ ಅಂಶಗಳ ಕುರಿತು ಸವಿಸ್ತಾರವಾಗಿ ವಿಚಾರಣೆ ನಡೆಸಿದರು. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಸಂಸದರು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕುವಂತೆ ಮುಖ್ಯಮಂತ್ರಿ ಅವರೊಂದಿಗೆ ವೈಯಕ್ತಿಕವಾಗಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ದುರಂತಕ್ಕೆ ಕಾರಣವಾದ ಕಟ್ಟಡದ ಮಾಲೀಕರು ಹಾಗೂ ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ನಿರ್ಲಕ್ಷ್ಯ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ನಿರ್ದೇಶನ ನೀಡಿದರು.

ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪಟ್ಟಣದಲ್ಲಿರುವ ಶಿಥಿಲಾವಸ್ಥೆಯ ಕಟ್ಟಡಗಳ ಸಮೀಕ್ಷೆ ನಡೆಸಿ, ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಾಜಶೇಖರ್ ನಾಯಕ್, ರಾಮಣ್ಣ ಇರಬಗೇರಾ, ಶರಣಗೌಡ ಗೌರಂಪೇಟೆ, ಜಯಂತರಾವ್ ಪತಂಗೆ, ಆದನಗೌಡ ಬುಂಕಲದೊಡ್ಡಿ, ಶಿವರಾಜ ಗೆಜ್ಜೆಬಾವಿ, ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ, ಪುರಸಭೆ ಪೌರಾಯುಕ್ತರು, ಪೆÇಲೀಸ್ ಇಲಾಖೆ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.