
ಕಲಬುರಗಿ,ಜು.4:ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಟ್ಟು 50 ಸಾವಿರ ರೂ.ದಂಡ ವಿಧಿಸಿ ಜಿಲ್ಲಾ ವಿಶೇಷ ಪೆÇೀಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.ಚಿಂಚೋಳಿ ತಾಲೂಕಿನ ಗ್ರಾಮವೊಂದರ ನಿವಾಸಿ ನಂದಪ್ಪ ಮಹಾದೇವ ಕಟ್ಟಿಮನಿ (30) ಶಿಕ್ಷೆಗೆ ಗುರಿಯಾದ ಅಪರಾಧಿ.
ಮಿರಿಯಾಣ ಪೆÇಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ಹಾಗೂ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೆÇೀಕ್ಸೋ) ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್. ಚವ್ಹಾಣ ಅವರು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವರು ವಾದ ಮಂಡಿಸಿದ್ದರು. ಆಗಿನ ತನಿಖಾಧಿಕಾರಿ ಪಿಎಸ್‍ಐ ಮಡಿವಾಳಪ್ಪ ಹಾಗೂ ಸಿಪಿಐ ಕಪಿಲದೇವ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಮಿರಿಯಾಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕ ದಂಪತಿಯ ಅಪ್ರಾಪ್ತ ವಯಸ್ಸಿನ ಬಾಲಕಿಯ ಪುಸಲಾಯಿಸಿ, 2025ರ ಫೆ.14ರ ರಾತ್ರಿ ಬಾಲಕಿಯನ್ನು ಆಕೆಯ ಮನೆಯಿಂದ ಅಪಹರಿಸಿಕೊಂಡು ಹೋಗಿದ್ದನು. ನಂತರ ಆಕೆಯ ಇಚ್ಛೆಗೆ ವಿರುದ್ಧವಾಗಿ ಆರೋಪಿ ಮೂರರಿಂದ ನಾಲ್ಕು ಬಾರಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಮಿರಿಯಾಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


























