
ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ,ಭಾರತದ ಮಾಜಿ ಉಪಪ್ರಧಾನ ಮಂತ್ರಿ ಡಾ.ಬಾಬು ಜಗಜೀವನರಾಂ ಅವರ 40 ನೇ ಪುಣ್ಯ ಸ್ಮರಣೆ ಅಂಗವಾಗಿ ಪುಷ್ಪನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ,ಜಗದೇವ ಗುತ್ತೇದಾರ,ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ್,ಮಜರ್ ಅಲಂಖಾನ್, ಪ್ರವೀಣ ಪಾಟೀಲ ಹರವಾಳ, ಡಾ.ಕಿರಣ ದೇಶಮುಖ,ಈರಣ್ಣ ಝಳಕಿ, ಶಿವಾನಂದ ಹೊನಗುಂಟಿ, ಕಿಶೋರ್ ಗಾಯಕವಾಡ ಅವರು ಸೇರಿದಂತೆ ಹಲವರಿದ್ದರು.





























