Home ಕ್ರೈಂ ಸುದ್ದಿಗಳು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು: ಮಹಿಳೆ ಸಾವು

ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು: ಮಹಿಳೆ ಸಾವು

ಭಾಲ್ಕಿ:ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದ ಹುಮನಾಬಾದ್- ಭಾಲ್ಕಿ ರಸ್ತೆಯ ಸರ್ಕಾರಿ ಆಸ್ಪತ್ರೆ ಬಳಿ ಕಾರ್ ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಮೃತಪಟ್ಟಿದ್ದಾಳೆ.

ಭಾನುವಾರ ಸಂಜೆ ಬೀದರ್ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರ್ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಬೀದರ್ ತಾಲ್ಲೂಕಿನ ಆಣದೂರು ಗ್ರಾಮದ ಸಂಜುಕುಮಾರ ಪುಂಡಲಿಕರಾವ್ ಪುಲೇಕರ್ (30), ಇವರ ಪತ್ನಿ ಸುಧಾರಾಣಿ ಹಾಗೂ ಭಾಲ್ಕಿ ತಾಲ್ಲೂಕಿನ ನೆಲವಾಡ ಗ್ರಾಮದ ಅಜಯ ಕಾಶಿನಾಥ (22), ಕಿರಣ್ ಅನಿಲ್ ಕುಮಾರ್ (21) ಗಂಭೀರ ಗಾಯಗಳಾಗಿವೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಧಾರಾಣಿ ರಾಜಕುಮಾರ (26) ಚಿಕಿತ್ಸೆ ಫಲಕಾರಿಯಾಗದೆ ಬೀದರ್ ಸರ್ಕಾರ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ.

ಈ ಸಂಬಂಧ ಮೃತ ಮಹಿಳೆಯ ತಂದೆ ಶ್ರೀಕಾಂತ ಧನ್ನೂರೆ ನೀಡಿದ ದೂರಿನ ಮೇರೆಗೆ ಧನ್ನೂರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.