Home ಜಿಲ್ಲೆ ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಸಂದೇಶ: ಪರಿಶೀಲನೆ

ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಸಂದೇಶ: ಪರಿಶೀಲನೆ

ಕಲಬುರಗಿ,ಜು.7-ನಗರದಲ್ಲಿನ ಕಲಬುರಗಿ ಜಿಲ್ಲಾ ನ್ಯಾಯಾಲಯದ ಈ-ಮೇಲ್‍ಗೆ ಹುಸಿ ಬಾಂಬ್ ಸಂದೇಶ ಬಂದಿದ್ದು, ಕೂಡಲೇ ಸ್ಥಳಕ್ಕೆ ನಗರ ಪೆÇಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಡಿಸಿಪಿಗಳಾದ ಶಾಲೂ., ಪ್ರವೀಣ ಹೆಚ್ ನಾಯಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರನ್ನು ಬೇರೆ ಕಡೆಗೆ ಸ್ಥಳಾಂತರಿಸಿ, ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ ಮತ್ತು ವಿದ್ವಂಸಕ ಕೃತ್ಯ ತಪಾಸಣೆ ದಳ ತಂಡವು ಸ್ಥಳ ಪರಿಶಿಲೀಸಲಾಗಿ ಯಾವುದೇ ರೀತಿಯ ಬಾಂಬ್ ಪತ್ತೆಯಾಗಿರುವುದಿಲ್ಲ.
ಈ ಘಟನೆಗೆ ಸಂಬಂಧಿಸಿದತೆ ಸ್ಟೇಷನ್ ಬಜಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೊಂದು ಸುಳ್ಳು ಬೆದರಿಕೆ ಈ-ಮೇಲ್ ಸಂದೇಶವಾಗಿರುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ.ತಿಳಿಸಿದ್ದಾರೆ.