Home ಜಿಲ್ಲೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರಿಂದ ಪ್ರತಿಭಟನೆ

ಸಂಜೆವಾಣಿ ವಾರ್ತೆ

ಹೊಸಪೇಟೆ. ಜು.೭ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರ ಸಂಘದ ನೇತೃತ್ವದಲ್ಲಿಂದು ವಿಜಯನಗರ ಜಿಲ್ಲೆಯ ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರು ಪ್ರತಿಭಟನೆ ನಡೆಸಿದರು.

ನಗರದ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದಿಂದ ವಾಲ್ಮೀಕಿ ವೃತ್ತ, ಮದಕರಿ ನಾಯಕ ವೃತ್ತ, ಮುಖ್ಯ ಮಸೀದಿ, ಗಾಂಧಿ ಚೌಕ್, ಮೂರಂಗಡಿ ವೃತ್ತ, ಪುಣ್ಯಮೂರ್ತಿ ವೃತ್ತ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ರಸ್ತೆ, ಕನಕದಾಸ ವೃತ್ತ ಮೂಲಕ ಪುನೀತ್ ರಾಜ್ಕುಮಾರ್ ವೃತ್ತಕ್ಕೆ ಆಗಮಿಸಿ, ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ನೇತೃತ್ವದ ರಾಜ್ಯ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರ ಸಂಘದ ರಾಜ್ಯ ಸಂಚಾಲಕ ಕೆ.ಎಂ. ಸಂತೋಷ್ ಕುಮಾರ್, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ವಾಹನಗಳಿಗೆ ಜಿಪಿಎಸ್ ಪ್ಯಾನಿಕ್ ಬಟನ್ ವ್ಯವಸ್ಥೆ ರದ್ದು ಮಾಡಬೇಕು,  ರಿಚಾಜ್೯ ತಾಂತ್ರಿಕ ದೋಷ ಸರಿಪಡಿಸಬೇಕು, ಡಿಸೇಲ್-ಪೆಟ್ರೋಲ್ ಬೆಲೆ ಇರಿಸಬೇಕು. ನಗರದ ಹದಗೆಟ್ಟ ರಸ್ತೆ ಗಳನ್ನು ಸರಿಪಡಿಸಬೇಕು  ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಮುಖಂಡರಾದ ಬಸವರಾಜ, ಎನ್.ಯಲ್ಲಾಲಿಂಗ, ವಿರೇಶ್, ಸುಧಾಕರ, ಭಾಷಾ ಸೇರಿದಂತೆ ಚಾಲಕರು ಭಾಗವಹಿಸಿದ್ದರು.