
ಸುಬ್ರಹ್ಮಣ್ಯ ನಗರ ವಾರ್ಡ್ ನಂಬರ್ ೬೬ರ ಸಂಗೊಳ್ಳಿ ರಾಯಣ್ಣ ಪಾರ್ಕ್‌ನಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಪವರ್ ಜಿಮ್ ಗೆ ಮಾಜಿ ಉಪಮುಖ್ಯಮಂತ್ರಿಗಳು, ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವಥ್ ನಾರಾಯಣ್ ಅವರು ಶಂಕು ಸ್ಥಾಪನೆ ನೆರವೇರಿಸಿದರು. ಮಾಜಿ ಪಾಲಿಕೆ ಸದಸ್ಯರಾದ ಮಂಜುನಾಥ್, ಸುಬ್ರಹ್ಮಣ್ಯನಗರ ವಾರ್ಡ್ ಬಿಜೆಪಿ ಮುಖಂಡರಾದ ಎನ್. ನಾಗರಾಜ್, ವಾರ್ಡ್ ಅಧ್ಯಕ್ಷ ಜಯಮೂರ್ತಿ, ಹಿರಿಯ ಮುಖಂಡರಾದ ನರಸಿಂಹಯ್ಯ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು




























