Home ಜಿಲ್ಲೆ ಕಲಬುರಗಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ಜಾಥಾಕ್ಕೆ ಚಾಲನೆ

ಬಾಲ ಕಾರ್ಮಿಕ ಪದ್ಧತಿ ವಿರೋಧಿ ಜಾಥಾಕ್ಕೆ ಚಾಲನೆ

ಜೇವರ್ಗಿ,ಜು.೯-ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನದ ಅಂಗವಾಗಿ ಜೇವರ್ಗಿ ಕೋರ್ಟ್ ಆವರಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾಕ್ಕೆ ಜೇವರ್ಗಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು, ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ತಯ್ಯಬಾ ಸುಲ್ತಾನಾ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲಾಯಿತು. ಮಕ್ಕಳನ್ನುಕೆಲಸಕ್ಕೆ ಬಳಸಿಕೊಳ್ಳುವುದು ಕಾನೂನು ಬಾಹಿರವಾಗಿದ್ದು, ಪ್ರತಿಯೊಬ್ಬರೂ ಮಕ್ಕಳ ಶಿಕ್ಷಣ ಮತ್ತು ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂಬ ಸಂದೇಶವನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರು,ಶಾಂತಗೌಡ ಪಾಟೀಲ್ ನರಿಬೋಳ ಉಪಾಧ್ಯಕ್ಷರುಭಾಷ ಪಟೇಲ್ ಮಾಲಿ ಪಾಟೀಲ್ ಯಾಳವಾರ , ಕಾರ್ಯ ದರ್ಶಿ ರಾಜಶೇಖರ್ ಶಿಲ್ಪಿ ಸರಕಾರಿ ಅಭಿಯೋಜಕರು,ಹಿರಿಯ ಕಾರ್ಮಿಕ ನಿರೀಕ್ಷಕ ಕೆ.ಎಸ್. ಪ್ರಸನ್ನ, ಸಂಸ್ಕಾರ ಪ್ರತಿಷ್ಠಾನ ಸಂಸ್ಥೆಯ ನಿರ್ದೇಶಕ ವಿಠಲ ಚಿಕಣಿ, ಮಾರ್ಗ ದರ್ಶಿ ಸಂಸ್ಥೆ ಮಕ್ಕಳ ಸಹಾಯವಾಣಿ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕ ಸಂತೋಷ ಕುಲಕರ್ಣಿ ಉಪಸ್ಥಿತರಿದ್ದರು.