
ಕಲಬುರಗಿ: ಜಿಪಂ ಹಾಗೂ ರಾಜ್ಯ ಸರಕಾರವು ತಕ್ಷಣವೇ ಗ್ರಾಪಂ, ತಾಪಂ, ಪಟ್ಟಣ ಪಂಚಾಯಿತಿ ಚುನಾವಣೆಗಳ ನು ನಡೆಸಬೇಕು ಎಂದು ಕರವೇ(ಪ್ರವೀಣ ಶೆಟ್ಟಿ) ಬಣದ ಕಲಬುರಗಿ ತಾಲೂಕ ಅಧ್ಯಕ್ಚ ವಿಜಯಕುಮಾರ ಅಂಕಲಗಿ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದು ವರ್ಷಗಳೇ ಕಳೆಯುತ್ತಿದ್ದರೂ ಚುನಾವಣೆ ನಡೆಸಲು ಸರಕಾರ ಮುಂದಾಗುತ್ತಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಜನಪ್ರತಿನಿಧಿಗಳಿಲ್ಲದೆ ಇರುವುದರಿಂದ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸಾರ್ವಜನಿಕರ ಸಮಸ್ಯೆಗಳು ಜಾಸ್ತಿಯಾಗಿವೆ.ಕುಡಿಯುವ ನೀರು,ರಸ್ತೆ,ಚರಂಡಿ ಸೇರಿ ಅಗತ್ಯ ಮೂಲಸೌಕರ್ಯಕ್ಕಾಗಿ ಜನರು ಕಚೇರಿಗಳಿಗೆ ಅಲೆಯುವಂತಾಗಿದೆ. ಜನ ಪ್ರತಿನಿಧಿಗಳಿದ್ದರೆ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದರು.ಆದರೆ ಈಗ ಆಡಳಿತ ಅಧಿಕಾರಿಗಳ ಕೈಗೆ ಸಿಲುಕಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಉದ್ದೇಶ ಪೂರ್ವಕವಾಗಿಯೇ ಹಿಂದೇಟು ಹಾಕಲಾಗುತ್ತಿದೆ. ಸರಕಾರದ ಈ ನಿರ್ಲಕ್ಷ್ಯ ಧೋರಣೆ ಖಂಡನೀಯವಾಗಿದೆ. ಚುನಾವಣೆಗಳು ಸಕಾಲಕ್ಕೆ ನಡೆಯದ ಕಾರಣ ಸ್ಥಳೀಯ ಮಟ್ಟದಲ್ಲಿ ಗುರುತಿಸಿಕೊಂಡು,ಸಾರ್ವಜನಿಕ ಸೇವೆ ಮಾಡಲು ಕಾತರರಾಗಿರುವ ಯುವ ಆಕಾಂಕ್ಷಿಗಳು ಹಾಗೂ ಸ್ಥಳೀಯ ಮುಖಂಡರು ರಾಜಕೀಯವಾಗಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಚುನಾವಣೆಗೆ ವರ್ಷಗಳಿಂದ ಸಿದ್ದತೆ ಮಾಡಿಕೊಂಡಿರುವ ಆಕಾಂಕ್ಷಿಗಳ ರಾಜಕೀಯ ಭವಿಷ್ಯದ ಜೊತೆ ಸರಕಾರ ಆಟವಾಡುತ್ತಿದೆ. ಚುನಾವಣೆಗಳು ವಿಳಂಬವಾಗುತ್ತಿರುವುದರಿAದ ಅವರ ನಾಯಕತ್ವದ ಬೆಳವಣಿಗೆಗೆ ಅಡ್ಡಿಯುಂಟಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.





























