Home ಮುಖಪುಟ ಸುದ್ದಿ ತ್ರಿವಳಿ ಕೊಲೆ ಹಂತಕ ಆತ್ಮಹತ್ಯೆ

ತ್ರಿವಳಿ ಕೊಲೆ ಹಂತಕ ಆತ್ಮಹತ್ಯೆ

ಬೆಂಗಳೂರು,ಜು.೧೧-ಕೆಆರ್ ಪುರಂ ಬಳಿಯಲ್ಲಿ ಪ್ರಿಯಕರನ ಜೊತೆ ಸೇರಿಕೊಂಡು ಶ್ವೇತಾ ತ್ರಿವಳಿ ಕೊಲೆ ಮಾಡಿ ತಿಂಗಳು ಕಳೆಯುವ ಮುನ್ನವೇ ನಗರದ ಕಾಮಾಕ್ಷಿಪಾಳ್ಯದ ಬಳಿ ಇಂದು ಬೆಳಿಗ್ಗೆ ಮತ್ತೊಂದು ತ್ರಿವಳಿ ಕೊಲೆ ನಡೆದಿದ್ದು,ಕೃತ್ಯ ನಡೆಸಿದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.


ಕಾಮಾಕ್ಷಿಪಾಳ್ಯದ ಕೊಟ್ಟಿಗೆ ಪಾಳ್ಯದಲ್ಲಿರುವ ದೇವಸ್ಥಾನದ ಬಳಿಯ ಮನೆಯಲ್ಲಿ ತಾಯಿ ಮಂಗಳಮ್ಮ (೫೫), ಅಜ್ಜಿ ನಂಜಮ್ಮ (೬೫) ಹಾಗೂ ಭಾವ ಸತೀಶ್ (೫೦) ಅವರನ್ನು ಕೊಲೆಗೈದು ಪ್ರಶಾಂತ್ (೩೪) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಅವರು ತಿಳಿಸಿದ್ದಾರೆ.
ಆರೋಪಿಯ ತಾಯಿ ಮಂಗಳಮ್ಮ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರೆ,ಅಜ್ಜಿ ನಂಜಮ್ಮ ಸ್ವಚ್ಛತಾ ಕೆಲಸಗಾರರಾಗಿ ಕೆಲಸ ಮಾಡುತ್ತಿದ್ದರು.ಭಾವ ಸತೀಶ್ ಪ್ಲಂಬರ್ ಕೆಲಸ ಮಾಡುತ್ತಿದ್ದು,ಅವಿವಾಹಿತರಾಗಿದ್ದ ಅವರು ಆರೋಪಿಯ ಮನೆಯಲ್ಲೇ ವಾಸಿಸುತ್ತಿದ್ದರು.


ಕಳೆದ ವರ್ಷದಿಂದ ಕುಟುಂಬಸ್ಥರೆಲ್ಲರು ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರೋಪಿ ಪ್ರಶಾಂತ್ ಕಾರು ಚಾಲಕನಾಗಿದ್ದು, ಆದರೆ ಕಳೆದ ಒಂದು ವರ್ಷದಿಂದ ಕೆಲಸಕ್ಕೆ ಹೋಗಿರಲಿಲ್ಲ.


ತಂದೆ ಕೆಲಸಕ್ಕೆ ಹೋಗಿದ್ದಾಗ ಪ್ರಶಾಂತ್ ಮೂವರನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.


ಮನೆಯ ಮುಖ್ಯದ್ವಾರದಲ್ಲಿಯೇ ಅಜ್ಜಿ ಹಾಗೂ ಅಮ್ಮನನ್ನು ಕೊಲೆ ಮಾಡಿದ್ದು, ಮಾವನನ್ನು ರೂಂನಲ್ಲಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬಳಿಕ ಪರಾರಿಯಾಗಲು ಯತ್ನಿಸಿದ್ದು, ಆತನನ್ನು ಗಮನಿಸಿದ ಮನೆ ಮಾಲೀಕ ಅಕ್ಕಪಕ್ಕದವರು ರೂಂನಲ್ಲಿ ಕೂಡಿಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ,ಪೊಲೀಸರು ಧಾವಿಸುವಷ್ಟರಲ್ಲಿಅತ ರೂಂನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.


ಆರೋಪಿ ಪ್ರಶಾಂತ್ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದ್ದು, ಕೊಲೆ ನಿಖರ ಕಾರಣ ತನಿಖೆಯಲ್ಲಿ ಹೊರಬರಬೇಕಿದೆ.
ಕೃತ್ಯ ನಡೆದ ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಯತೀಶ್ ಹೇಳಿದರು.


ತಂದೆ ಮನೆಯಲ್ಲಿರದಿದ್ದಾಗ ಮಾರಕಾಸ್ತ್ರ ಬಳಸಿ ಪ್ರಶಾಂತ್ ಮೂವರನ್ನೂ ಹತ್ಯೆಗೈದಿದ್ದಾನೆ. ಮನೆಯವರ ಕಿರುಚಾಟ ಕೇಳಿ ಧಾವಿಸಿದ್ದ ಅಕ್ಕಪಕ್ಕದವರು ಆರೋಪಿ ಪ್ರಶಾಂತ್‌ನನ್ನು ಹಿಡಿದು ರೂಮ್‌ನಲ್ಲಿ ಕೂಡಿ ಹಾಕಿದ್ದಾರೆ.


ಹೆದರಿದ ರೂಮ್‌ನಲ್ಲಿಯೇ ಪ್ರಶಾಂತ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಶಾಂತ್ ಮಾನಸಿಕ ಆರೋಗ್ಯದ ಸಮಸ್ಯೆ ಹೊಂದಿದ್ದ ಎಂದು ಹೇಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದರು.


ತಾಯಿಯೊಂದಿಗೆ ಪ್ರಶಾಂತ್ ಸಣ್ಣಪುಟ್ಟ ಗಲಾಟೆ ಮಾಡುತ್ತಿದ್ದ. ರಾತ್ರಿ ಏನೂ ಜಗಳವಾಗಿರಲಿಲ್ಲ. ನಾನು ಬೆಳಗ್ಗೆ ಇಸ್ತ್ರಿ ಅಂಗಡಿ ತೆರೆಯಲು ಹೋದೆ. ಆತ ಮನೆಯಲ್ಲಿ ಈ ರೀತಿ ಮಾಡಿದ್ದಾನೆ. ನಾನು ಮನೆಯಲ್ಲಿದ್ದಿದ್ದರೆ ನನ್ನನ್ನೂ ಮುಗಿಸಿ ಬಿಡುತ್ತಿದ್ದನೇನೋ ಗೊತ್ತಿಲ್ಲ. ಅವನಿಗೆ ಜ್ಞಾನ ಸರಿಯಾಗಿಯೇ ಇತ್ತು. ಚಾಲಕನಾಗಿ ಕೆಲಸ ಮಾಡುತ್ತಿದ್ದ. ಯಾಕೆ ಈ ರೀತಿ ಮಾಡಿದ್ದಾನೋ ಗೊತ್ತಾಗುತ್ತಿಲ್ಲ” ಎಂದು ಪ್ರಶಾಂತ್‌ನ ತಂದೆ ಚಿಕ್ಕಣ್ಣ ತಿಳಿಸಿದ್ದಾರೆ.