
ಕಲಬುರಗಿ,ಜು.12-ನಗರದ ಹೊರವಲಯದ ಹೈಕೋರ್ಟ್ ಕ್ರಾಸ್ ಸಮೀಪ ಶುಕ್ರವಾರ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಪತ್ನಿ ಸ್ಥಳದಲ್ಲೇ ಮೃತಪಟ್ಟರೆ, ಪತಿ ಸೇರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ನಗರದ ಜಯದೇವ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಬೆಂಗಳೂರು ಮೂಲದ ಸುನಿತಾ ಗಂಡ ಬಸವರಾಜ (50) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತಿ ಬಸವರಾಜ ಮರಿಗೌಡ (52) ಮತ್ತು ವಿಮಲಾ ಅರ್ಜುನರಾವ್ (61) ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಕಾರಿನಲ್ಲಿ ದೇವಲ್‍ಗಾಣಗಾಪುರಕ್ಕೆ ಹೋಗಿ ವಾಪಸ್ ಕಲಬುರಗಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಲಾರಿಯು ಕಾರಿಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಡಿಸಿಪಿ ಶಾಲೂ ಸೇರಿದಂತೆ ಹಿರಿಯ ಪೆÇಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಸಂಚಾರಿ ಪೆÇಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದೆ.































