
ಭಾರತಿನಗರ ನಿವಾಸಿಗಳ ವೇದಿಕೆಯ, ಅಧ್ಯಕ್ಷ ಸುರೇಂದ್ರ ರವಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಿಧನರಾದ ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾಕ್ಸ್ ಟೌನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯ ಸದಸ್ಯರು ಭಾಗವಹಿಸಿ, ಭಾರತೀಯ ಸಂಗೀತ ಕ್ಷೇತ್ರಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು. ಅವರ ಅಮರ ಕಂಠಸಿರಿ ಮತ್ತು ಸಂಗೀತ ಪರಂಪರೆ ಮುಂದಿನ ಪೀಳಿಗೆಗಳಿಗೂ ಸದಾ ಸ್ಫೂರ್ತಿಯಾಗಿರಲಿದೆ.

































