
ಜಮಖಂಡಿ | ಜು 14:ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮೃತ ಮಹಿಳೆಯನ್ನು ಹುಲ್ಯಾಳ ಗ್ರಾಮದ 33 ವರ್ಷದ ಗೌರವ್ವ ಮೆಳ್ಳಿಗೆರಿ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಗೌರವ್ವ ಅವರು ಕಳೆದ ಮೇ 17ರಂದು ನಾಪತ್ತೆಯಾಗಿದ್ದು, ಈ ಸಂಬಂಧ ಅವರ ಪತಿ ಅಶೋಕ ಅವರು ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ತಿಳಿದು ಬಂದಿದೆ.
ಜುಲೈ 12ರಂದು ಗ್ರಾಮದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಶವವು ಬಹಳಷ್ಟು ಕೊಳೆತ ಸ್ಥಿತಿಯಲ್ಲಿದ್ದು, ದೇಹದ ಮಾಂಸ ಹಾಗೂ ಚರ್ಮ ಸಂಪೂರ್ಣವಾಗಿ ಕೊಳೆಯಲ್ಪಟ್ಟಿತ್ತು. ತಲೆಬುರುಡೆ ಮತ್ತು ಎಲುಬುಗಳು ಮಾತ್ರ ಉಳಿದಿರುವುದಾಗಿ ತಿಳಿದು ಬಂದಿದೆ. ಪ್ರಾಥಮಿಕ ಮಾಹಿತಿಯಂತೆ, ಕಳೆದ ತಿಂಗಳಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಮಹಿಳೆಯ ಸಾವಿನ ನಿಖರ ಕಾರಣವು ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೆÇಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.
ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಪ್ಪ ಮಡ್ಡಿ, ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹಾಗೂ ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯ ಪಿಎಸ್‍ಐ ಗಂಗಾಧರ ಪೂಜೇರಿ ನೇತೃತ್ವದ ಪೆÇಲೀಸ್ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಮಖಂಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.






























