Home ಜಿಲ್ಲೆ ಕಲಬುರಗಿ ಕರಿಕಲ್‍ಗೆ “ಕಾಯಕ ಕಣ್ಮಣಿ” ಪ್ರಶಸ್ತಿ

ಕರಿಕಲ್‍ಗೆ “ಕಾಯಕ ಕಣ್ಮಣಿ” ಪ್ರಶಸ್ತಿ

ಕಲಬುರಗಿ,ಜು.14-ಸಾಹಿತ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಕಲಬುರಗಿ ಜಿಲ್ಲೆಯ ಕಡಣಿ ಗ್ರಾಮದವರಾದ ಹಾಗೂ ಕುವೆಂಪು ವಿಶ್ವವಿದ್ಯಾಲಯದಲ್ಲಿ ಕರಣಿಕರಾಗಿ ಸೇವೆ ಸಲ್ಲಿಸುತ್ತಿರುವ ಶಾಂತಮಲ್ಲಪ್ಪ ಕರಿಕಲ್ ಅವರಿಗೆ ರಾಷ್ಟ್ರಮಟ್ಟದ “ಕಾಯಕ ಕಣ್ಮಣಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜು.12 ರಂದು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ 125 ಬೆಳಕು ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರೊಂದಿಗೆ ಶಾಂತಮಲ್ಲಪ್ಪ ಕರಿಕಲ್ ಅವರಿಗೂ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.
ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಪ್ರಶಸ್ತಿ ಸ್ವೀಕರಿಸಿದ ಶಾಂತಮಲ್ಲಪ್ಪ ಕರಿಕಲ್ ಅವರಿಗೆ ಅವರ ಸ್ನೇಹಿತರು, ಸಾಹಿತ್ಯಾಸಕ್ತರು, ಶಿಕ್ಷಣ ಕ್ಷೇತ್ರದ ಗಣ್ಯರು ಹಾಗೂ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.