Home ಜಿಲ್ಲೆ ರೈತರ ಹಬ್ಬ : ಮಣ್ಣೆತ್ತಿನ ಅಮವಾಸ್ಯೆ ಆಚರಣೆ

ರೈತರ ಹಬ್ಬ : ಮಣ್ಣೆತ್ತಿನ ಅಮವಾಸ್ಯೆ ಆಚರಣೆ

ಸಂಜೆವಾಣಿ ವಾರ್ತೆ

ಹಗರಿಬೊಮ್ಮನಹಳ್ಳಿ: ಜು.14 ಮಣ್ಣೆತ್ತಿನ ಅಮಾವಾಸ್ಯೆಗೆ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಡಗರ ಸಂಭ್ರಮ ಹಾಗೂ ಭಕ್ತಿಯಿಂದ ಈ ಹಬ್ಬವನ್ನು ಆಚರಿಸುತ್ತಾರೆ.

ರೈತರು ತಮ್ಮ ಬದುಕಿಗೆ ಆಸರೆಯಾಗಿರುವ ಎತ್ತುಗಳನ್ನು ರೈತರು ಪೂಜಿಸುವ ಸಂಪ್ರದಾಯ ಮೊದಲಿನಿಂದಲೂ ನಡೆದುಕೊಂಡು ಬಂದಿದೆ.

ಕುಂಬಾರರ ಮನೆಯಲ್ಲಿ ತಯಾರಿಸಿದ ಮಣ್ಣಿನ ಜೋಡೆತ್ತುಗಳನ್ನು ತಂದು,

ದೇವರ ಜಗುಲಿಯ ಮೇಲೆ ಇರಿಸಿ, ವಿವಿಧ ಹೂ ಪತ್ರಿಗಳಿಂದ ಪೂಜಿಸಿ, ಹುಲ್ಲು ಮತ್ತು ಧಾನ್ಯಗಳನ್ನು ಎತ್ತುಗಳ ಮುಂದಿನ ಗೋದಲಿಯಲ್ಲಿಟ್ಟು ಭಕ್ತಿಯಿಂದ ಮಳೆಬೆಳೆ ನೀಡಲೆಂದು ಆರಾಧಿಸುವರು.

ಎತ್ತುಗಳಿಗೆ ‘ಆರತಿ ಮಾಡಿ ವಿವಿಧ ಸಿಹಿ ಪದಾರ್ಥಗಳನ್ನು ನೈವೇದ್ಯ ಮಾಡಿ, ಒಟ್ಟಾಗಿ ಕುಳಿತು ಊಟ ಮಾಡುವ ಪದ್ದತಿ ಉತ್ತರ ಕರ್ನಾಟಕದಲ್ಲಿ ಮನೆಮಾತಾಗಿದೆ.