
ಕಲಬುರಗಿ: ಸರ್ಕಾರಿ ಶಿಕ್ಷಕರು ಸರಿ ಸಮಾನ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವುದನ್ನು ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ನಡು ವಿಕಾಸ ವೇದಿಕೆ ಮತ್ತು ರಿಪಬ್ಲಿಕನ್ ಯೂಥ್ ಫೆಡರೇಷನ್ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಕಲ್ಯಾಣ ನಾಡು ವಿಕಾಸ ವೇದಿಕೆ ಅಧ್ಯಕ್ಷ ಮುತ್ತಣ್ಣ ನಡಗೇರಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.































