Home ಜಿಲ್ಲೆ ಕಲಬುರಗಿ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ.ಅವರ ಜನ್ಮದಿನ: ಸನ್ಮಾನ

ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ.ಅವರ ಜನ್ಮದಿನ: ಸನ್ಮಾನ

ಕಲಬುರಗಿ,ಜು.23-ಕಲಬುರಗಿ ನಗರದ ಪೆÇಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ.ಅವರ ಹುಟ್ಟುಹಬ್ಬದ ಅಂಗವಾಗಿ ಎನ್.ಕೆ. ಆಸ್ಪತ್ರೆಯ ಅಧ್ಯಕ್ಷರು ಹಾಗೂ ಖ್ಯಾತ ಗ್ಯಾಸ್ಟ್ರೊ ಮತ್ತು ಲ್ಯಾಪರೋಸ್ಕೋಪಿಕ್ ಶಸ್ತ್ರಚಿಕಿತ್ಸಕರಾದ ಡಾ.ಆರಿಫ್ ರಝಾ ಅಹ್ಮದ್ ಅವರು ಇಂದು ಪೆÇಲೀಸ್ ಆಯುಕ್ತರ ಕಚೇರಿಯಲ್ಲಿ ಅವರನ್ನು ಭೇಟಿ ಮಾಡಿ, ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಿ ಜನ್ಮದಿನದ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಡಾ.ಆರಿಫ್ ರಝಾ ಅವರು ಮಾತನಾಡಿ, ” ಡಾ.ಶರಣಪ್ಪ ಎಸ್.ಡಿ. ಅವರ ದಕ್ಷ, ಪ್ರಾಮಾಣಿಕ ಹಾಗೂ ಜನಪರ ಆಡಳಿತದಿಂದ ಕಲಬುರಗಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿ ನಿರ್ವಹಣೆಯಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ಅವರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾಗಿದೆ. ಅವರಿಗೆ ಉತ್ತಮ ಆರೋಗ್ಯ, ಸುಖ-ಶಾಂತಿ ಹಾಗೂ ಸಮಾಜ ಸೇವೆಯಲ್ಲಿ ಇನ್ನಷ್ಟು ಯಶಸ್ಸು ಲಭಿಸಲಿ” ಎಂದು ಹಾರೈಸಿದರು.
ಎನ್.ಕೆ. ಆಸ್ಪತ್ರೆ ಕುಟುಂಬದ ಪರವಾಗಿ ಡಾ.ಶರಣಪ್ಪ ಎಸ್.ಡಿ.ಅವರಿಗೆ ಹೃತ್ಪೂರ್ವಕ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿ, ಅವರ ಸೇವಾ ಪಯಣ ಮತ್ತಷ್ಟು ಯಶಸ್ವಿಯಾಗಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಎನ್.ಕೆ.ಆಸ್ಪತ್ರೆಯ ಆಡಳಿತ ವಿಭಾಗದ ಸುರೇಶ್ ಹಾಗೂ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಮುಬೀನ್ ಅಹ್ಮದ್ ಉಪಸ್ಥಿತರಿದ್ದರು.