
ಬೆಂಗಳೂರು, ಜು.27-ಹಳದಿ ಮೆಟ್ರೋ ಮಾರ್ಗದಲ್ಲಿ ಹಳಿಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಹುಸ್ಕೂರ್ ರೋಡ್ ಮೆಟ್ರೋ ಸ್ಟೇಷನ್ ಬಳಿ ಘಟನೆ ಸಂಭವಿಸಿದೆ.
ಸಂಜೆ 5:50ರ ಸುಮಾರಿಗೆ 35 ವರ್ಷದ ವ್ಯಕ್ತಿಯೋರ್ವ ರೈಲು ಬರುತ್ತಿರುವುದನ್ನು ಗಮನಿಸಿ ಹಳಿಗೆ ಹಾರಿ ಆತ್ಮಹತ್ಯೆ ಶರಣಾಗಿದ್ದಾನೆ. ವ್ಯಕ್ತಿ ರೈಲ್ವೆ ಹಳಿಗೆ ಹಾರಿದ್ದನ್ನು ಗಮನಿಸಿದ ಸ್ಟೇಷನ್ ಕಂಟ್ರೋಲರ್ ಕೂಡಲೇ ಪವರ್ ಆಫ್ ಮಾಡಿದ್ದಾರೆ.
ಸದ್ಯ ಘಟನೆಯಿಂದ ಯೆಲ್ಲೋ ಲೈನ್ ಮಾರ್ಗ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಆರ್.ವಿ. ರಸ್ತೆ ಮತ್ತು ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಕಾರ್ಯಾಚರಣೆ ನಡೆಸುತ್ತಿದೆ. ಸದ್ಯ ಹಳಿಯಿಂದ ವ್ಯಕ್ತಿಯ ಮೃತದೇಹ ಮೇಲಕ್ಕೆತ್ತಲು ಹರಸಾಹಸ ಪಡುತ್ತಿದ್ದಾರೆ. ಸ್ಥಳಕ್ಕೆ ಹೆಬ್ಬುಗೋಡಿ ಪೊಲೀಸರು ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.































