
ತುಮಕೂರು, ಜು. ೨೮- ಕುಣಿಗಲ್ ತಾಲ್ಲೂಕು ಅರೇ ಶಂಕರ ಮಠದ ಪೀಠಾಧ್ಯಕ್ಷರಾದ ಸಿದ್ಧರಾಮ ಚೈತನ್ಯ ಸ್ವಾಮೀಜಿಗಳ ಜನ್ಮವರ್ಧಂತಿ ಅಂಗವಾಗಿ ನಗರದ ಉಪ್ಪಾರಹಳ್ಳಿ ಒಕ್ಕಲಿಗರ ಸಂಘ ಪದಾಧಿಕಾರಿಗಳು ಸ್ವಾಮೀಜಿಗಳಿಗೆ ಗುರುವಂದನೆ ಸಲ್ಲಿಸಿದರು.
ಸ್ವಾಮೀಜಿಗಳ ಜನ್ಮವರ್ಧಂತಿ ಅಂಗವಾಗಿ ಶ್ರೀಮಠದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ರವರು ಉಚಿತ ವಿದ್ಯಾರ್ಥಿನಿಲಯ ಉದ್ಘಾಟನೆ ನೆರವೇರಿಸಿದರು. ಕುಣಿಗಲ್ ಶಾಸಕ ಡಾ.ರಂಗನಾಥ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಉಪ್ಪಾರಹಳ್ಳಿ ಒಕ್ಕಲಿಗರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ, ಉಪಾಧ್ಯಕ್ಷ ರಾಮಕೃಷ್ಣಯ್ಯ, ಕಾರ್ಯದರ್ಶಿ ಉಪ್ಪಾರಹಳ್ಳಿ ಕುಮಾರ್, ನಿರ್ದೇಶಕರಾದ ರಂಗಸ್ವಾಮಿ, ಆರ್.ಎಲ್. ರಾಜು, ನರಸಿಂಹಮೂರ್ತಿ, ಜಯಣ್ಣ, ರಂಗೇಗೌಡ ಮತ್ತಿತರರು ಸಿದ್ಧರಾಮ ಚೈತನ್ಯ ಸ್ವಾಮೀಜಿಗಳಿಗೆ ಗುರುವಂದನೆ ಸಲ್ಲಿಸಿದರು.


































