Home ಜಿಲ್ಲೆ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ವಿಜಯಪುರ, ಜು. 29: ಆಗಸ್ಟ್ 15ರಂದು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಗಸ್ಟ್ 15ರಂದು ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು, ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಸಮಾರಂಭಕ್ಕೆ ಆಗಮಿಸುವ ಗಣ್ಯರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ, ವಾಹನ ನಿಲುಗಡೆ, ಭದ್ರತೆ, ಆರೋಗ್ಯ ಸೇವೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಧ್ವಜಾರೋಹಣ, ಪಥಸಂಚಲನ, ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಸಂಬಂಧಿಸಿದಂತೆ ಸಮರ್ಪಕ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಇದೇ ದಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಇರುವ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮಕ್ಕೂ ಅಗತ್ಯ ಸಿದ್ಧತೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪೆÇ್ರಬೇಷನರಿ ಐಪಿಎಸ್ ಅಧಿಕಾರಿ ಅಭಿಷೇಕ ಸೆಹರಾ, ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.