Home ಜಿಲ್ಲೆ ಮಂಗಳೂರು ಮಂಗಳೂರು-ಬೆಂಗಳೂರು ರೈಲು ಮಾರ್ಗ ಸಂಚಾರಕ್ಕೆ ರೆಡಿ

ಮಂಗಳೂರು-ಬೆಂಗಳೂರು ರೈಲು ಮಾರ್ಗ ಸಂಚಾರಕ್ಕೆ ರೆಡಿ

ಮಂಗಳೂರು – ಬೆಂಗಳೂರು ರೈಲು ಮಾರ್ಗದ ಎಡಕುಮೇರಿ – ಸಿರಿಬಾಗಿಲು ನಡುವೆ ರೈಲು ಮಾರ್ಗಕ್ಕೆ ಮಣ್ಣು ಕುಸಿತ ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಸೋಮವಾರ ರಾತ್ರಿ ಬಳಿಕ ರೈಲು ಸಂಚಾರ ಮರು ಆರಂಭಗೊಂಡಿದೆ.
ಮಂಗಳೂರು: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಎಡಕುಮೇರಿ – ಸಿರಿಬಾಗಿಲು ನಡುವೆ ರೈಲು ಮಾರ್ಗಕ್ಕೆ ಮಣ್ಣು ಕುಸಿತ ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಸೋಮವಾರ ರಾತ್ರಿ ಬಳಿಕ ರೈಲು ಸಂಚಾರ ಮರು ಆರಂಭಗೊಂಡಿದೆ. ದುರಸ್ತಿ ಕಾರ್ಯಾಚರಣೆ ಬಳಿಕ ರೈಲು ಮಾರ್ಗವನ್ನು ಸೋಮವಾರ ರಾತ್ರಿ ಸಂಚಾರಕ್ಕೆ ಸೂಕ್ತವಾಗಿದೆ ಎಂದು ಪ್ರಮಾಣೀಕರಿಸಲಾಯಿತು.
೧೦ ಕಿ.ಮೀ. ತಾತ್ಕಾಲಿಕ ವೇಗದ ನಿರ್ಬಂಧ
ಘಟನಾ ಸ್ಥಳದಲ್ಲಿ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಘಂಟೆಗೆ ೧೦ ಕಿ.ಮೀ. ತಾತ್ಕಾಲಿಕ ವೇಗದ ನಿರ್ಬಂಧ ಜಾರಿಯಲ್ಲಿದೆ. ರೈಲು ಸಂಚಾರದ ಸಾಮಾನ್ಯ ವೇಳಾ ಪಟ್ಟಿಗಳನ್ನು ಹಂತಹಂತವಾಗಿ ಮರು ಹೊಂದಿಸಲಾಗುತ್ತದೆ, ಕೆಲ ವಿಳಂಬಗಳು ಮುಂದುವರಿದು ಬಳಿಕ ಎಂದಿನಂತೆ ರೈಲು ಸೇವೆ ಮುಂದುವರಿಯಲಿದೆ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ.ದುರಸ್ತಿ ಕಾರ್ಯಾಚರಣೆ ಸ್ಥಳಕ್ಕೆ ಡಿಆರ್‌ಎಂ ಮುದಿತ್ ಮಿತ್ತಲ್ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿ ನಿರ್ದೇಶನಗಳನ್ನು ನೀಡಿದರು. ಕಾರ್ಯಾಚರಣೆ ಪೂರ್ಣವಾದ ಬಳಿಕ ಪರೀಕ್ಷಾರ್ಥ ಎಂಜಿನ್ ಓಡಿಸಲಾಯಿತು.