
ಕಲಬುರಗಿ,ಆ.14-ನಗರದ ಹುಮನಾಬಾದ ರಸ್ತೆಯ ಮಾಲಗತ್ತಿ ಗ್ರಾಮದ ಹೊರವಲಯದಲ್ಲಿ ನೆಲೆಸಿದ್ದ ಉತ್ತರ ಪ್ರದೇಶದ ಶಂಕಿತ ಉಗ್ರನನ್ನು ಕಲಬುರಗಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಸದರಪುರ ಪ್ರದೇಶದ ನಿವಾಸಿ ಮೊಹಮ್ಮದ್ ಸಮೀರ್ (23) ಬಂಧಿತ ಆರೋಪಿಯಾಗಿದ್ದು, ಆತನಿಂದ ಒಂದು ಸ್ಮಾರ್ಟ್ಫೋನ್ ಹಾಗೂ ಒಂದು ಕೀಪ್ಯಾಡ್ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ.
ಸ್ಥಳೀಯ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಧಿಕಾರಿಗಳು ಆರೋಪಿಯ ವಿಚಾರಣೆ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಆರೋಪಿ ವಿರುದ್ಧ ಬಿಎನ್ಎಸ್ ಕಾಯ್ದೆಯ 113 (3) (ಭಯೋತ್ಪಾದನಾ), 197 (ರಾಷ್ಟ್ರೀಯ ಏಕತೆಗೆ ಧಕ್ಕೆ) ಕಲಂಗಳ ಅಡಿಯಲ್ಲಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






























