
ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರ ವಂದನೆ ಸಲ್ಲಿಸಿ ರಾಷ್ಟ್ರಗೀತೆಯನ್ನು ಹಾಡುವ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್‌ರವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಲ್ಲೇಶ್ವರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರವರಿಗೆ ಮನವಿ ಸಲ್ಲಿಸಲಾಯಿತು. ಅಧ್ಯಕ್ಷ ಕುಶಾಲ್ ಹರುವೇಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ಮುಖಂಡರಾದ ಪುಟ್ಟರಾಜು, ಮಂಜುನಾಥ್, ಮಾಧವ ಹನೂರು, ಮತ್ತಿತರರು ಇದ್ದಾರೆ.






























