
ಬೀದರ್: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನಿಗೆ ಪೆÇೀಕ್ಸೊ ಕಾಯ್ದೆಯಡಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ?2.50 ಲಕ್ಷ ದಂಡ ವಿಧಿಸಿ ಬಸವಕಲ್ಯಾಣದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಯಶವಂತ ಆರ್.ತಾವರೆ ಆದೇಶಿಸಿದ್ದಾರೆ.
ದಂಡ ಭರಿಸಲು ತಪ್ಪಿದರೆ ಹೆಚ್ಚುವರಿಯಾಗಿ ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ವಿಧಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕರಾದ ಬಸವಂತರೆಡ್ಡಿ ಹಾಗೂ ಸಂತೋಷಕುಮಾರ ಟಿ. ಸಿದ್ಧೇಶ್ವರ ಅವರು ಸರ್ಕಾರದ ಪರ ವಾದ ಮಂಡಿಸಿದರು.
ಹುಮನಾಬಾದ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಮಾರ್ಚ್ 17ರಂದು ಅತ್ಯಾಚಾರ ಘಟನೆ ನಡೆದಿತ್ತು. ಪ್ರಕರಣ ದಾಖಲಿಸಿದ್ದ ಪೆÇಲೀಸರು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.






























