ಕಲಬುರಗಿ; ಗ್ರಾಮ ಪಂಚಾಯತಿ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಪಂಚಾಯತಿ ಕಚೇರಿ ಮುಂದೆ ಇಂದು ಧರಣಿ ಸತ್ಯಾಗ್ರಹ ನಡೆಸಲಾಯಿತು. ಸಂಘದ ಜಿಲ್ಲಾ ಅಧ್ಯಕ್ಷ ನಾಗರಾಜ ಭಂಗೂರ, ಪ್ರಧಾನ ಕಾರ್ಯದರ್ಶಿ ಮಾರುತಿ ಸುಗ್ಗಾ, ಭೋಜರಾಜ ಮಾಲಿಪಾಟೀಲ, ಬಂದಗಿಸಾಬ ನದಾಫ್, ಮಹಾದೇವಪ್ಪ, ಮಲ್ಲಣ್ಣ ಹೊನಗುಂಟಿ ಸೇರಿದಂತೆ ಮತ್ತಿತರರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.