Home ಜಿಲ್ಲೆ ಕಲಬುರಗಿ ಮಾದಿಗ ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಅಡಿಪಾಯ: ಡಾ. ಹಂಸವೇಣಿ

ಮಾದಿಗ ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಅಡಿಪಾಯ: ಡಾ. ಹಂಸವೇಣಿ

ಕಲಬುರಗಿ,ಆ.18: ನಗರದ ಕನ್ನಡ ಭವನದಲ್ಲಿ ಶ್ರೀ ಮಾದಾರ ಚನ್ನಯ್ಯ ಮಾತಾ ಸಮಿತಿ ಕರ್ನಾಟಕ, ಕಲಬುರಗಿ ಜಿಲ್ಲಾ ಘಟಕದ ಸಮಿತಿ ರಚನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.
ಕಾರ್ಯಕ್ರಮವನ್ನು ವೇದಿಕೆಯ ಮೇಲಿರುವ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಸಮಿತಿಯ ವತಿಯಿಂದ ಗಣ್ಯರು ಹಾಗೂ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಮಿತಿಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಡಾ. ಹಂಸವೇಣಿ, ಮಾದಿಗ ಸಮಾಜದಲ್ಲಿ ಇಂದಿಗೂ ಶಿಕ್ಷಣದ ಕೊರತೆ ಇದೆ. ಹೀಗಾಗಿ ಸಮಾಜದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯವನ್ನು ರೂಪಿಸಬೇಕು ಎಂದು ಕರೆ ನೀಡಿದರು.
ವಿಶೇಷವಾಗಿ ಸಮಾಜದ ಮಹಿಳೆಯರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಯುವತಿಯರು ಹಾಗೂ ಮಹಿಳೆಯರು ಸರ್ಕಾರಿ ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವಕಾಶಗಳನ್ನು ಪಡೆಯುವತ್ತ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಜಿನಕೇರಿ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಡಾ. ಹಂಸವೇಣಿ ಸೇರಿದಂತೆ ನೂತನ ಪದಾಧಿಕಾರಿಗಳನ್ನು ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಭಾವತಿ, ರೇಣುಕಾ, ಗೀತಾ, ಅರುಂಧತಿ, ದಶರಥ ಕಲಗುರ್ತಿ, ದಿಗಂಬರ ತ್ರೀಮೂರ್ತಿ, ಮುರಳಿ, ಕಿರಣ ಪೂಜಾರಿ, ರಂಜಿತ್ ಮೂಲಿಮನಿ, ರುಕ್ಕಪ್ಪ ಕಾಂಬ್ಳೆ, ದತ್ತು ಕೋರೆ, ಕೃಷ್ಣಾ ತಂಗಡಗಿ, ಮಹೇಶ ಕರದಳ್ಳಿ, ರಾಜು ಕಟ್ಟಿಮನಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.