Home ಮುಖಪುಟ ಸುದ್ದಿ ದಕ್ಷಿಣಕ್ಕೆ ನ್ಯಾಯಯುತ ಪಾಲಿಗೆ ಡಿಕೆಶಿ ಆಗ್ರಹ

ದಕ್ಷಿಣಕ್ಕೆ ನ್ಯಾಯಯುತ ಪಾಲಿಗೆ ಡಿಕೆಶಿ ಆಗ್ರಹ

೩೧ನೇ ದಕ್ಷಿಣ ವಲಯ ಮಂಡಳಿ ಸಭೆ

ಮಹಾಬಲಿಪುರಂ, ಆ. ೨೦: “ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ ನ್ಯಾಯಯುತವಾಗಿ ಅನುದಾನ ನೀಡಿ. ದಕ್ಷಿಣ ಭಾರತಕ್ಕೆ ಸಲ್ಲಬೇಕಾದ ನ್ಯಾಯಯುತ ಪಾಲನ್ನು ನೀಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಒತ್ತಾಯಿಸಿದರು.

ತಮಿಳುನಾಡಿನ ಮಹಾಬಲಿಪುರಂನಲ್ಲಿ ಇಂದು ನಡೆದ ೩೧ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಮುಂದಿನ ಚರ್ಚೆಯ ಸಂದರ್ಭದಲ್ಲಿ ಈ ಪ್ರತಿಯೊಂದು ವಿಷಯದ ಕುರಿತಾದ ನಿರ್ದಿಷ್ಟ ಸಮಸ್ಯೆಗಳು, ಸಂಬಂಧಿತ ಅಂಕಿ-ಅಂಶಗಳು ಹಾಗೂ ಕರ್ನಾಟಕ ಪ್ರಸ್ತಾಪಿಸುವ ಪರಿಹಾರ ಕ್ರಮಗಳನ್ನು ಈ ಮಂಡಳಿಯ ಮುಂದೆ ಮಂಡಿಸುತ್ತೇನೆ.” ಕರ್ನಾಟಕ ಇಲ್ಲಿ ದೂರು ನೀಡಲು ಬಂದಿಲ್ಲ. ಆರ್ಥಿಕತೆಯನ್ನು ಮುನ್ನಡೆಸುತ್ತಿರುವ ರಾಜ್ಯಗಳಿಗೆ ಸಲ್ಲಬೇಕಾದ ಗೌರವ, ನ್ಯಾಯಯುತ ಅಂಶಗಳನ್ನು ತಿಳಿಸಲು ಬಂದಿದ್ದೇವೆ. ನಮ್ಮೊಂದಿಗೆ ಹೆಜ್ಜೆ ಹಾಕಿ. ನಾವು ಭಾರತದ ಭವಿಷ್ಯ ಬೆಳಗುವ ಅವಕಾಶಗಳನ್ನು ಮುಂದುವರೆಸಿಕೊಂಡು ಹೋಗುತ್ತೇವೆ ” ಎಂದರು.


ಕರ್ನಾಟಕ, ದಕ್ಷಿಣ ಭಾರತದ ಮೂಲಕ ಭಾರತದ ಅಭಿವೃದ್ಧಿ ಪಯಣ


“ನಾನು ಹೆಮ್ಮೆಯ ಭಾರತೀಯನಾಗಿ ಹಾಗೂ ೧೬ ಶತಮಾನಗಳಿಗೂ ಹೆಚ್ಚಿನ ಇತಿಹಾಸವನ್ನು ಹೊಂದಿರುವ ನಮ್ಮ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಹೆಮ್ಮೆಯ ಕನ್ನಡಿಗನಾಗಿ ಮಾತನಾಡುತ್ತಿದ್ದೇನೆ. ನಾನು ಕರ್ನಾಟಕದ ಪರವಾಗಿ ಮಾತ್ರವಲ್ಲ, ಇಡೀ ದಕ್ಷಿಣ ಭಾರತದ ಪರವಾಗಿ ಮಾತನಾಡುತ್ತಿದ್ದೇನೆ. ಭಾರತದ ಅಭಿವೃದ್ಧಿಯ ಪಯಣವು ದಕ್ಷಿಣ ಭಾರತದ ಮೂಲಕ ಸಾಗುತ್ತದೆ. ಭಾರತದ ಅಭಿವೃದ್ಧಿಯ ತೇರು ದಕ್ಷಿಣ ಭಾರತ ಮೂಲಕವೇ ಸಾಗುತ್ತಿತ್ತು, ಸಾಗುತ್ತಿದೆ, ಸಾಗುತ್ತದೆ” ಎಂದರು.

“ನಮ್ಮ ಐದು ರಾಜ್ಯಗಳು ಭಾರತದ ಒಟ್ಟು ಜನಸಂಖ್ಯೆಯ ಸುಮಾರು ಶೇ.೨೦ರಷ್ಟನ್ನು ಹೊಂದಿದ್ದರೂ, ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.೩೩ರಷ್ಟು ಕೊಡುಗೆ ನೀಡುತ್ತಿವೆ. ಅಂದರೆ, ಭಾರತದ ಆರ್ಥಿಕತೆಯಲ್ಲಿ ಉತ್ಪತ್ತಿಯಾಗುವ ಪ್ರತಿ ಮೂರು ರೂಪಾಯಿಗಳಲ್ಲಿ ಒಂದು ರೂಪಾಯಿ ದಕ್ಷಿಣ ಭಾರತದಿಂದ ಬರುತ್ತದೆ. ಭಾರತದ ಆರ್ಥಿಕತೆಯ ಈ ಪ್ರಮುಖ ಎಂಜಿನ್‌ಲ್ಲಿ ಕರ್ನಾಟಕವು ಅತ್ಯಂತ ಬಲಿಷ್ಠ ಚಾಲಕ ಶಕ್ತಿಗಳಲ್ಲಿ ಒಂದಾಗಿದೆ” ಎಂದು ಪುನಃರುಚ್ಚರಿಸಿದರು.

“ಸಾಫ್ಟ್‌ವೇರ್ ರಪ್ತಿನಲ್ಲಿ ನಾವು ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದೇವೆ. ಭಾರತದ ಸಾಫ್ಟ್‌ವೇರ್ ರಪ್ತಿನಲ್ಲಿ ಕರ್ನಾಟಕದ ಕೊಡುಗೆ ಶೇ.೪೨ರಷ್ಟಿದೆ. ಸುಮಾರು ೧,೧೦೦ ಗ್ಲೋಬಲ್ ಕೇಪಬಲಿಟಿ ಸೆಂಟರ್‌ಗಳನ್ನು (ಜಿಸಿಸಿ) ಹೊಂದಿರುವ ನಾವು, ದೇಶದಲ್ಲೇ ಅತಿ ಹೆಚ್ಚು ಜಿಸಿಸಿಗಳನ್ನು ಹೊಂದಿರುವ ರಾಜ್ಯವಾಗಿದ್ದೇವೆ. ೨೦೧೯ರಿಂದ ೨೦೨೫ರ ಅವಧಿಯಲ್ಲಿ ಭಾರತದ ಒಟ್ಟು ವಿದೇಶಿ ನೇರ ಬಂಡವಾಳ (ಎಫ್‌ಡಿಐ) ಈಕ್ವಿಟಿ ಒಳಹರಿವಿನಲ್ಲಿ ಶೇ.೨೧ಕ್ಕಿಂತ ಹೆಚ್ಚಿನ ಪಾಲನ್ನು ಕರ್ನಾಟಕ ಆಕರ್ಷಿಸಿದೆ” ಎಂದು ವಿವರಿಸಿದರು.

“ಭಾರತದ ಜನಸಂಖ್ಯೆಯಲ್ಲಿ ಕರ್ನಾಟಕದ ಪಾಲು ಕೇವಲ ಶೇ.೫.೫ರಷ್ಟಿದ್ದರೂ, ದೇಶದ ಜಿಡಿಪಿಗೆ ನಮ್ಮ ಕೊಡುಗೆ ಶೇ.೯ರಷ್ಟಿದೆ. ಕರ್ನಾಟಕದ ತಲಾ ಆದಾಯ ದೇಶದಲ್ಲೇ ಅತ್ಯಧಿಕವಾಗಿದ್ದು, ಭಾರತದ ತಲಾ ಆದಾಯಕಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ದೇಶದ ಏರೋಸ್ಪೇಸ್ ಉದ್ಯಮದ ಶೇ.೬೦ರಷ್ಟು ಭಾಗ ಕರ್ನಾಟಕದಲ್ಲಿದೆ. ಭಾರತದ ಕಾಫಿ ಉತ್ಪಾದನೆಯ ಸುಮಾರು ಶೇ ೭೦ ಮತ್ತು ಸಂಸ್ಕರಿಸಿದ ಸೌತೆಕಾಯಿ ರಫ್ತಿನ ಶೇ.೯೦ ಕೊಡುಗೆ ನಮ್ಮದಾಗಿದೆ. ಬೆಂಗಳೂರು ಇಂದು ಕ್ಯಾಲಿಫೋರ್ನಿಯಾದ ಸಿಲಿಕಾನ್ ವ್ಯಾಲಿ, ನ್ಯೂಯಾರ್ಕ್, ಬೀಜಿಂಗ್ ಮತ್ತು ಲಂಡನ್‌ಗಳೊಂದಿಗೆ ವಿಶ್ವದ ಪ್ರಮುಖ ಐದು ಎಐ ನಗರಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ” ಎಂದು ಹೇಳಿದರು.
“೧೫ನೇ ಹಣಕಾಸು ಆಯೋಗದ ಅವಧಿಯಲ್ಲಿ ವಿಭಜಿಸಬಹುದಾದ ತೆರಿಗೆ ಭಾಗದಲ್ಲಿ ಕರ್ನಾಟಕದ ಪಾಲು ಶೇ.೪.೭ರಿಂದ ಶೇ.೩.೬ಕ್ಕೆ ಇಳಿಕೆಯಾಯಿತು. ಇದು ಸುಮಾರು ಶೇ.೨೩ರಷ್ಟು ಕಡಿತವಾಗಿದ್ದು, ಆರು ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ಅಂದಾಜು ರೂ.೬೫,೦೦೦ ಕೋಟಿಯಷ್ಟು ನಷ್ಟ ಉಂಟಾಗಿದೆ. ೧೫ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ರೂ.೫,೪೯೫ ಕೋಟಿ ವಿಶೇಷ ಅನುದಾನ ಮತ್ತು ರೂ.೬,೦೦೦ ಕೋಟಿ ರಾಜ್ಯ-ನಿದಿ ಷ್ಟ ಅನುದಾನವನ್ನು ಶಿಫಾರಸು ಮಾಡಿತ್ತು. ಆದರೆ, ಈ ಎರಡೂ ಶಿಫಾರಸು ಮಾಡಿದ ಅನುದಾನಗಳು ಬಿಡುಗಡೆಯಾಗಿಲ್ಲ” ಎಂದು ಆಗಿರುವ ಅನ್ಯಾಯ ವಿವರಿಸಿದರು.

“೧೬ನೇ ಹಣಕಾಸು ಆಯೋಗವು ನಮ್ಮ ರಾಜ್ಯಕ್ಕೆ ಭಾಗಶಃ ನ್ಯಾಯ ಒದಗಿಸಿದ್ದು, ಕರ್ನಾಟಕದ ಪಾಲನ್ನು ಶೇ.೩.೬೪ರಿಂದ ಶೇ.೪.೧೩೧ಕ್ಕೆ ಹೆಚ್ಚಿಸುವ ಮೂಲಕ ಕೆಲವು ಮಟ್ಟಿಗೆ ಮರುಸ್ಥಾಪಿಸಿದೆ. ಆದಾಗ್ಯೂ, ನಮ್ಮ ಪಾಲನ್ನು ಸಂಪೂರ್ಣವಾಗಿ ಶೇ.೪.೭ಕ್ಕೆ ನಿಲ್ಲಿಸಬೇಕಿದೆ. ಕರ್ನಾಟಕವು ಜಿಎಸ್‌ಟಿ ಮತ್ತು ಆದಾಯ ತೆರಿಗೆಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ರಾಜ್ಯವಾಗಿದೆ. ಬೆಳವಣಿಗೆ ಮತ್ತು ಆದಾಯದ ವಿಷಯದಲ್ಲಿ ಉತ್ತಮ ಸಾಧನೆ ಮಾಡುವ ರಾಜ್ಯವನ್ನು ಪ್ರೋತ್ಸಾಹಿಸಬೇಕೇ ಹೊರತು, ದಂಡಿಸಬಾರದು” ಎಂದರು.


ರಾಜ್ಯಗಳ ಪಾಲು ಅಂತಿಮಗೊಂಡಿರುವ ಸಂದರ್ಭದಲ್ಲಿ, ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಯೋಜನೆ, Sಖಿಖಖ ದಕ್ಷಿಣ ಭಾಗ, ರಾಯಚೂರಿಗೆ ಏಮ್ಸ್ ಹಾಗೂ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್‌ನಂತಹ ಹೆಚ್ಚುವರಿ ಕೇಂದ್ರ ಯೋಜನೆಗಳ ಮೂಲಕ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.


“ಇಡೀ ದಕ್ಷಿಣ ಭಾರತದ ಮತ್ತೊಂದು ಪ್ರಮುಖ ವಿಚಾರ ಎಂದರೆ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ. ಯಾವುದೇ ದಕ್ಷಿಣ ರಾಜ್ಯ ತನ್ನ ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳುವುದಿಲ್ಲ ಎಂಬ ಭರವಸೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಪ್ರಾತಿನಿಧ್ಯವೆಂದರೆ ಕೇವಲ ಸಂಖ್ಯೆಗಳ ವಿಷಯವಲ್ಲ. ಅದು ನಮ್ಮ ಪ್ರಭಾವ ಮತ್ತು ಧ್ವನಿಯ ವಿಷಯವೂ ಹೌದು. ದಕ್ಷಿಣ ಭಾರತವು ದೇಶದ ಕರೆಯನ್ನು ಸ್ವೀಕರಿಸಿ, ಜನಸಂಖ್ಯೆಯನ್ನು ಶಿಸ್ತುಬದ್ಧವಾಗಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ಯಶಸ್ಸೇ ನಮ್ಮ ಧ್ವನಿಯನ್ನು ದುರ್ಬಲಗೊಳಿಸಲು ಕಾರಣವಾಗಬಾರದು. ನಮ್ಮ ಆರ್ಥಿಕ ತೂಕಕ್ಕೆ ತಕ್ಕ ರಾಜಕೀಯ ಧ್ವನಿಯೂ ಇರಬೇಕು” ಎಂದು ವಾದಿಸಿದರು.


“ನಮ್ಮ ಪ್ರಾತಿನಿಧ್ಯದ ಪಾಲನ್ನು ಸಂಖ್ಯಾತ್ಮಕವಾಗಿಯೂ ಅಥವಾ ಅನುಪಾತದಲ್ಲಿಯೂ ಕಡಿಮೆ ಮಾಡಬಾರದು. ನಾನು ಹೇಳುತ್ತಿರುವ ಈ ನಿಲುವನ್ನು ಇಲ್ಲಿ ಉಪಸ್ಥಿತರಿರುವ ಎಲ್ಲ ಮುಖ್ಯಮಂತ್ರಿಗಳು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ೧೯೭೧ರ ಜನಸಂಖ್ಯಾ ಆಧಾರವನ್ನು ಗೌರವಿಸಬೇಕು ಮತ್ತು ನಮ್ಮ ಧ್ವನಿಯ ಬಲವನ್ನು ಸಂರಕ್ಷಿಸಬೇಕು” ಎಂದು ಒತ್ತಾಯಿಸಿದರು.


“ನಮ್ಮ ಮಹಿಳೆಯರಿಗೆ ದೊರೆಯಬೇಕಾದ ನ್ಯಾಯ ಮತ್ತಷ್ಟು ವಿಳಂಬವಾಗಬಾರದು. ಮಹಿಳೆಯರು ತಮ್ಮ ನ್ಯಾಯಯುತ ಪ್ರಾತಿನಿಧ್ಯಕ್ಕಾಗಿ ಬಹಳ ಕಾಲದಿಂದ ಕಾಯುತ್ತಿದ್ದಾರೆ. ಮಹಿಳಾ ಮೀಸಲಾತಿಯು ಮತ್ತೊಂದು ಜನಗಣತಿಯವರೆಗೆ ಕಾಯಬೇಕಾದ ಅಗತ್ಯವಿಲ್ಲ. ಆದ್ದರಿಂದ, ಪ್ರಸ್ತುತ ಇರುವ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಂಡು, ಇದೇ ಸ್ಥಾನಗಳ ಸಂಖ್ಯೆಯೊಳಗೆ ಮಹಿಳಾ ಮೀಸಲಾತಿಯನ್ನು ಒದಗಿಸುವಂತೆ ಈ ಮಂಡಳಿಯು ಒಂದು ನಿರ್ಣಯವನ್ನು ಅಂಗೀಕರಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ನಮ್ಮ ಈ ಸಾಮೂಹಿಕ ನಿಲುವಿನ ಹಿಂದೆ ನನ್ನ ಸಹ ಮುಖ್ಯಮಂತ್ರಿಗಳು ಒಗ್ಗಟ್ಟಾಗಿ ನಿಲ್ಲಬೇಕೆಂದು ನಾನು ಕರೆ ನೀಡುತ್ತೇನೆ” ಎಂದರು.


“ನಮ್ಮ ಧ್ವನಿಯಲ್ಲಿ ನ್ಯಾಯಯುತತೆ ಒಂದು ಭಾಗವಾದರೆ, ನಮ್ಮ ಸಂಪನ್ಮೂಲಗಳಲ್ಲಿ ನ್ಯಾಯಯುತ ಪಾಲು ಇನ್ನೊಂದು ಭಾಗವಾಗಿದೆ. ಈ ಸಭೆಯಲ್ಲಿರುವ ಪ್ರತಿಯೊಂದು ರಾಜ್ಯಕ್ಕೂ ನೀರಿಗಿಂತ ಮಹತ್ವದ ಸಂಪನ್ಮೂಲ ಮತ್ತೊಂದಿಲ್ಲ. ನಮ್ಮ ನದಿಗಳು ರಾಜಕೀಯ ಗಡಿಗಳನ್ನು ಗುರುತಿಸುವುದಿಲ್ಲ. ಕಾವೇರಿ, ಕೃಷ್ಣಾ, ತುಂಗಭದ್ರಾ, ಪೆನ್ನಾರ್ ಮತ್ತು ಪಾಲಾರ್ ನದಿಗಳು ಇಡೀ ದಕ್ಷಿಣ ಪರ್ಯಾಯ ದ್ವೀಪದ ಜೀವನಾಡಿಗಳಾಗಿವೆ. ನೀರು ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು. ನೀರಿನ ಹಂಚಿಕೆಯಿಂದ ನೀರಿನ ಸಹಕಾರದತ್ತ ಸಾಗುವ ಸಮಯ ಈಗ ಬಂದಿದೆ” ಎಂದು ಕರೆ ನೀಡಿದರು.


“ಕೃಷ್ಣಾ ನದಿ, ಮೇಲ್ದಂಡೆ ಭದ್ರಾ ಯೋಜನೆ ಹಾಗೂ ನದಿಗಳ ಜೋಡಣೆಯ ಕುರಿತು ಕರ್ನಾಟಕದ ನಿರ್ದಿಷ್ಟ ನಿಲುವನ್ನು ಚರ್ಚೆಯ ಸಂದರ್ಭದಲ್ಲಿ ಈ ಮಂಡಳಿಯ ಮುಂದೆ ಮಂಡಿಸುತ್ತೇನೆ. ಆದರೆ, ನೀರು ನನ್ನ ಮಾತಿನ ಆರಂಭ ಮಾತ್ರ. ನಮ್ಮ ಕಾಳಜಿಗಳು ಅಲ್ಲಿಗೆ ಮುಗಿಯುವುದಿಲ್ಲ. ಆರೋಗ್ಯ ಸೇವೆಗಳ ಹಣಕಾಸು, ಶಿಕ್ಷಣ ಮತ್ತು ಪೌಷ್ಟಿಕಾಂಶ, ಅತ್ಯಂತ ಬಡ ಕುಟುಂಬಗಳಿಗೆ ವಸತಿ, ಕರಾವಳಿ ಸವೆತ ಮತ್ತು ವಿಪತ್ತು ನಿರ್ವಹಣೆಗೆ ನೆರವು, ಗಣಿಗಾರಿಕೆ ಮತ್ತು ಖನಿಜ ಸಂಪತ್ತು

ಹೊಂದಿರುವ ರಾಜ್ಯಗಳ ಹಣಕಾಸಿನ ಹಕ್ಕುಗಳು, ಕೇಂದ್ರ ಸಂಸ್ಥೆಗಳಿಗೆ ರಾಜ್ಯಗಳು ನೀಡಿರುವ ಭೂಮಿ, ನ್ಯಾಯ ವಿತರಣೆ ಮತ್ತು ಡಿಜಿಟಲ್ ಮೂಲಸೌಕರ್ಯ, ನಮ್ಮ ಗ್ರಾಮಗಳಲ್ಲಿ ಬ್ಯಾಂಕಿಂಗ್ ಮತ್ತು ಹಣಕಾಸು ಒಳಗೊಳ್ಳುವಿಕೆ, ನಮ್ಮ ರೈತರಿಗೆ ಬೆಂಬಲ ಇಂದಿನ ಕಾರ್ಯಸೂಚಿಯಲ್ಲಿ ಅಧಿಕೃತವಾಗಿ ಸೇರಿಸದಿದ್ದರೂ, ಈ ಮಂಡಳಿಯ ಮುಂದೆ ಪ್ರಸ್ತಾಪಿಸುವಷ್ಟು ಮಹತ್ವವುಳ್ಳ ಇನ್ನೂ ಎರಡು ವಿಷಯಗಳಿವೆ ಎಂದು ನಾನು ಭಾವಿಸುತ್ತೇನೆ” ಎಂದರು.


“ಈ ಕಾನೂನು ಚೌಕಟ್ಟನ್ನು ಬಲಪಡಿಸಿ, ಈ ಅಕ್ರಮ ವ್ಯವಹಾರದಿಂದ ಲಾಭ ಪಡೆಯುವವರ ವಿರುದ್ಧ ತ್ವರಿತ ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಗಳಿಗೆ ಅಗತ್ಯ ಬೆಂಬಲ ನೀಡಬೇಕೆಂದು ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ. ಇವು ಪ್ರತ್ಯೇಕ ಬೇಡಿಕೆಗಳಲ್ಲ. ನಮ್ಮ ಜನರಿಗಾಗಿ ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹೇಗೆ ಕಾರ್ಯಗತಗೊಳಿಸಬೇಕು ಎಂಬುದಕ್ಕೆ ಸಂಬಂಧಿಸಿದ ಪ್ರಶ್ನೆಗಳಾಗಿವೆ. ಮುಂದಿನ ಚರ್ಚೆಯ ಸಂದರ್ಭದಲ್ಲಿ ಈ ಪ್ರತಿಯೊಂದು ವಿಷಯದ ಕುರಿತಾದ ನಿರ್ದಿಷ್ಟ ಸಮಸ್ಯೆಗಳು, ಸಂಬಂಧಿತ ಅಂಕಿ-ಅಂಶಗಳು ಹಾಗೂ ಕರ್ನಾಟಕ ಪ್ರಸ್ತಾಪಿಸುವ ಪರಿಹಾರ ಕ್ರಮಗಳನ್ನು ಈ ಮಂಡಳಿಯ ಮುಂದೆ ಮಂಡಿಸುತ್ತೇನೆ” ಎಂದು ತಿಳಿಸಿದರು.

ಮಹಿಳಾ ಮೀಸಲಾತಿಗೆ ಸಿಎಂ ಡಿ.ಕೆ. ಶಿವಕುಮಾರ್ ಒತ್ತಾಯ


ಮುಂಬರುವ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಯಲ್ಲಿ (ಡೆಲಿಮಿಟೇಶನ್) ಪ್ರಸ್ತುತ ಇರುವ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಂಡು, ಅದರ ಒಳಗಡೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣವೇ ಒದಗಿಸಬೇಕು ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.


ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆದ ೩೧ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಈ ಕೆಳಗಿನ ಪ್ರಮುಖ ವಿಷಯಗಳನ್ನು

ಪ್ರಸ್ತಾಪಿಸಿದರು:


ಮಹಿಳೆಯರು ತಮ್ಮ ನ್ಯಾಯಯುತ ಪ್ರಾತಿನಿಧ್ಯಕ್ಕಾಗಿ ಸುದೀರ್ಘ ಕಾಲದಿಂದ ಕಾಯುತ್ತಿದ್ದಾರೆ. ಮೀಸಲಾತಿ ಜಾರಿಗಾಗಿ ಮತ್ತೊಂದು ಜನಗಣತಿಯವರೆಗೆ ಕಾಯುವ ಅಗತ್ಯವಿಲ್ಲ. ಹಾಲಿ ಇರುವ ಲೋಕಸಭಾ ಸ್ಥಾನಗಳ ವ್ಯಾಪ್ತಿಯಲ್ಲೇ ಮಹಿಳಾ ಮೀಸಲಾತಿ ನೀಡುವ ಕುರಿತು ಈ ಮಂಡಳಿಯು ಸರ್ವಸಮ್ಮತ ನಿರ್ಣಯ ಅಂಗೀಕರಿಸಬೇಕು.


ನೀರು ದಕ್ಷಿಣ ಭಾರತದ ಜೀವನಾಡಿಯಾಗಿದ್ದು, ರಾಜ್ಯಗಳ ನಡುವೆ ವಿಭಜನೆ ತರದೆ ಸಹಕಾರ ಮೂಡಿಸಬೇಕು. ಕಾವೇರಿ, ಕೃಷ್ಣಾ, ತುಂಗಭದ್ರಾ, ಪೆನ್ನಾರ್ ಮತ್ತು ಪಾಲಾರ್ ನದಿಗಳ ನೀರಿನ ಹಂಚಿಕೆಯಲ್ಲಿ ಸಮಾನತೆ, ಪಾರದರ್ಶಕತೆ ಹಾಗೂ ಪರಸ್ಪರ ಗೌರವದ ತತ್ತ್ವಗಳನ್ನು ಪಾಲಿಸುವುದು ಅಗತ್ಯ.
ನ್ಯಾಯಮಂಡಳಿಗಳ ತೀರ್ಪಿನಂತೆ ಕರ್ನಾಟಕಕ್ಕೆ ಸಿಗಬೇಕಾದ ನೀರಿನ ನ್ಯಾಯಯುತ ಪಾಲು ಹಾಗೂ ಮೇಲ್ದಂಡೆ ಭದ್ರಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಸಮಯೋಚಿತ ಪೂರ್ಣಗೊಳಿಸುವಿಕೆಗೆ ಕೇಂದ್ರ ಸರ್ಕಾರ ಸಾಥ್ ನೀಡಬೇಕು.