
ಬೀದರ್:ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಬೆಂಗಳೂರಿನ ಫೆÇೀಟೋಜರ್ನಲಿಸ್ಟ್ ಅಸೋಸಿಯೇಷನ್ ಆಫ್ ಬೆಂಗಳೂರು (Pಎಂಃ) ವತಿಯಿಂದ ಹಿರಿಯ ಛಾಯಾಗ್ರಾಹಕ ಹಾಗೂ ಪತ್ರಿಕಾ ಛಾಯಾಗ್ರಾಹಕ ಗೋಪಿಚಂದ್ ತಾಂದಳೆ ಅವರನ್ನು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅಮೂಲ್ಯ ಸೇವೆಯನ್ನು ಗುರುತಿಸಿ ಗೌರವಿಸಲು ಆಯ್ಕೆ ಮಾಡಲಾಗಿದೆ.
ಈ ಗೌರವ ಸಮಾರಂಭವು ಆಗಸ್ಟ್ 22 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ನಲ್ಲಿ ನಡೆಯಲಿದೆ. ಈ ಕುರಿತು ಫೆÇೀಟೋಜರ್ನಲಿಸ್ಟ್ ಅಸೋಸಿಯೇಷನ್ ಆಫ್ ಬೆಂಗಳೂರು ಅಧ್ಯಕ್ಷರಾದ ಮೋಹನ್ ಕುಮಾರ್ ಬಿ.ಎನ್. ಅವರು ಗೋಪಿಚಂದ್ ತಾಂದಳೆ ಅವರಿಗೆ ಮಾಹಿತಿ ನೀಡಿ, ಸಮಾರಂಭಕ್ಕೆ ಆಗಮಿಸಿ ಗೌರವ ಸ್ವೀಕರಿಸುವಂತೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.
ಸುಮಾರು 25 ವರ್ಷಗಳಿಂದ ಪತ್ರಿಕಾ ಛಾಯಾಗ್ರಹಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗೋಪಿಚಂದ್ ತಾಂದಳೆ ಅವರು ವಿವಿಧ ಪತ್ರಿಕೆಗಳಲ್ಲಿ ಪತ್ರಿಕಾ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದು, ಬೀದರ್ ಜಿಲ್ಲೆಯ ಪ್ರಮುಖ ಘಟನೆಗಳು, ಸಾಮಾಜಿಕ, ಸಾಂಸ್ಕøತಿಕ ಹಾಗೂ ಸಾರ್ವಜನಿಕ ವಿಷಯಗಳನ್ನು ತಮ್ಮ ಕ್ಯಾಮೆರಾ ಮೂಲಕ ದಾಖಲಿಸುತ್ತಿದ್ದಾರೆ.
ತಮ್ಮ ಸೇವೆಯನ್ನು ಗುರುತಿಸಿ ಬೆಂಗಳೂರಿನಲ್ಲಿ ಗೌರವಿಸಲು ಆಯ್ಕೆ ಮಾಡಿರುವುದಕ್ಕೆ ಗೋಪಿಚಂದ್ ತಾಂದಳೆ ಅವರು ಫೆÇೀಟೋಜರ್ನಲಿಸ್ಟ್ ಅಸೋಸಿಯೇಷನ್ ಆಫ್ ಬೆಂಗಳೂರು ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.































