
ಕಲಬುರಗಿ: ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿಂದುಳಿದ ವರ್ಗಗಳ ಹರಿಕಾರರಾದ ಡಿ.ದೇವರಾಜ ಅರಸು ರವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಭಾವಚಿತ್ರಕ್ಕೆ ಪೂಜ್ಯ ಸಲ್ಲಿಸಿ ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಸಿಇಒ ರಾಹುಲ ಶರಣಪ್ಪ ಸಂಕನೂರ್, ಡಿ.ದೇವರಾಜ ಅರಸು ರವರ ಜಯಂತಿ ಸಮಿತಿ ಅಧ್ಯಕ್ಷÀ ವಿನೋದ್ ಕುಮಾರ್ ಜೆನೆವರಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಂಗಮೇಶ್ವರ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.





























