
ಧಾರವಾಡ, ಆ. ೨೫: ಧಾರವಾಡ ತಾಲ್ಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅರವಿಂದ ಏಗನಗೌಡರ ಅವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷೆಯ ೫ ಗ್ಯಾರಂಟಿ ಯೋಜನೆಗಳು ಯಾವುದೇ ಲೋಪದೋಷವಿಲ್ಲದೆ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಲಾ ಮಕ್ಕಳ ಸಂಚಾರ: ಶಾಲಾ ಮಕ್ಕಳಿಗೆ ತೊಂದರೆಯಾಗದAತೆ ಸಾರಿಗೆ ಬಸ್ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಕ್ರಮ.
ಗೃಹಲಕ್ಷಿ÷್ಮ ಮರುಪಾವತಿ: ಮೃತಪಟ್ಟ ಫಲಾನುಭವಿಗಳ ಖಾತೆಗೆ ಆಕಸ್ಮಿಕವಾಗಿ ಜಮೆಯಾದ ಹೆಚ್ಚುವರಿ ಹಣವನ್ನು ಕುಟುಂಬಸ್ಥರೊAದಿಗೆ ಸೌಹಾರ್ದಯುತವಾಗಿ ಚರ್ಚಿಸಿ ಮನವೊಲಿಸಿ ಸರ್ಕಾರಕ್ಕೆ ಮರುಪಾವತಿಸಲು ಸೂಚನೆ.
ಪಡಿತರ ಅಂಗಡಿ ಪಾರದರ್ಶಕತೆ: ಎಲ್ಲಾ ನ್ಯಾಯಬೆಲೆ ಅಂಗಡಿಗಳ ಮುಂಭಾಗದಲ್ಲಿ ಪಡಿತರ ವಿತರಣಾ ದಿನಾಂಕ ಮತ್ತು ಸಮಯದ ಮಾಹಿತಿ ಫಲಕ ಕಡ್ಡಾಯವಾಗಿ ಅಳವಡಿಸಲು ಸೂಚನೆ.
ಯುವನಿಧಿ ಜಾಗೃತಿ: ಯುವನಿಧಿ ಯೋಜನೆಯ ಬಗ್ಗೆ ಕಾಲೇಜು ಮಟ್ಟದಲ್ಲಿ ವ್ಯಾಪಕ ಪ್ರಚಾರ ಹಾಗೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚನೆ ಇವು ಸಭೆಯಲ್ಲಿನ ಪ್ರಮುಖ ಸೂಚನೆಗಳು.






























