
ಬೀದರ : ಬಿ.ವಿ. ಭೂಮರಡ್ಡಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಬೀದರದಲ್ಲಿ ಬಿ.ಎ., ಬಿ.ಎಸ್ಸಿ., ಬಿ.ಕಾಂ. ಹಾಗೂ ಬಿ.ಸಿ.ಎ. ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಡಾ. ರಾಜನೀಶ್ ವಾಲಿ, ಆಡಳಿತ ಮಂಡಳಿ ಸದಸ್ಯರು, ಎಚ್.ಕೆ. ಇ ಸಂಸ್ಥೆ ಹಾಗೂ ಸಂಚಾಲಕರು, ಬಿ.ವಿ.ಬಿ. ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪದವಿ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವುದು ಅತ್ಯಂತ ಅಗತ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವುದು ಹಾಗೂ ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿ ಭವಿಷ್ಯವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮ ಮಹತ್ವದ ಹೆಜ್ಜೆಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ದೀಪಾ ರಾಗಾ ಅವರು ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತರಬೇತಿಯ ಸಂಪೂರ್ಣ ಪ್ರಯೋಜನ ಪಡೆದುಕೊಂಡು ತಮ್ಮ ಜ್ಞಾನ, ಕೌಶಲ್ಯ ಮತ್ತು ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು. ನಿರಂತರ ಅಧ್ಯಯನ, ಶಿಸ್ತು ಮತ್ತು ಪರಿಶ್ರಮದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬಹುದು ಈ ತರಬೇತಿಯ ಮೂಲಕ ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ, ಪ್ರಸ್ತುತ ವಿದ್ಯಮಾನಗಳು, ತಾರ್ಕಿಕ ಸಾಮರ್ಥ್ಯ, ಗಣಿತ, ಭಾಷಾ ಕೌಶಲ್ಯ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಮಾದರಿ ಪ್ರಶ್ನೆಗಳ ಕುರಿತು ಮಾರ್ಗದರ್ಶನ ನೀಡಲಾಗುವುದು ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಈ ಕಾರ್ಯಕ್ರಮ ಡಾ. ಶಿವಲೀಲಾ ಮಠಪತಿ ನಿರ್ವಹಿಸಿದರು.































