Home Uncategorized ಹೆಡಗಾಪೂರ : ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ

ಹೆಡಗಾಪೂರ : ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ

ಔರಾದ್: ತಾಲೂಕಿನ ಹೆಡಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಆಯೋಜಿಸಲಾಗಿದ್ದ ಜಾಬ್ ಕಾರ್ಡ್ ಮೇಳಕ್ಕೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಅವರು
ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಅರ್ಹ ಕೂಲಿಕಾರ್ಮಿಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಜಾಬ್ ಕಾರ್ಡ್ ಮೇಳ ಆಯೋಜಿಸಲಾಗುತ್ತಿದೆ. ಮೇಳದಲ್ಲಿ ಹೊಸದಾಗಿ ಜಾಬ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು, ಈಗಾಗಲೇ ಇರುವ ಜಾಬ್ ಕಾರ್ಡ್‍ಗಳನ್ನು ಪರಿಶೀಲಿಸಿ, ಉದ್ಯೋಗದ ಬೇಡಿಕೆ ಸಲ್ಲಿಸುವ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಲಾಗುತ್ತಿದೆ ಎಂದರು.

ವಿಬಿ-ಜಿ ರಾಮ್ ಜಿ ಯೋಜನೆಯಡಿ ಅನುಮತಿಸಲಾದ 318 ವಿವಿಧ ಕಾಮಗಾರಿಗಳಿದ್ದು, ಕೂಲಿಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯಡಿ ದಿನಗೂಲಿ ರೂ.370ರಿಂದ ರೂ.382ಕ್ಕೆ ಹೆಚ್ಚಳ, ವಾರ್ಷಿಕ ಮಾನವ ದಿನಗಳ ಮಿತಿ 100ರಿಂದ 125 ದಿನಗಳಿಗೆ ಹೆಚ್ಚಳ, ಒಂದು ಗ್ರಾಮೀಣ ರೋಜ್‍ಗಾರ್ ಗ್ಯಾರಂಟಿ ಕಾರ್ಡ್ ಮೂಲಕ ವಾರ್ಷಿಕವಾಗಿ ರೂ.47,750ರವರೆಗೆ ಕೂಲಿ ಪಡೆಯುವ ಅವಕಾಶವಿದೆ ಎಂದು ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶರಣಪ್ಪ ಗಾದಗೆ, ಡಿಇಒ ದತ್ತು ಭೋಸ್ಲೆ,
ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಕಾರ್ಯದರ್ಶಿ ರಜನೀಶ್, ಗ್ರಾಮ ಪಂಚಾಯತಿ ಸಿಬ್ಬಂದಿಯವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.