
ಆನೇಕಲ್.ಆ.೨೯-ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ, ಶಿಸ್ತು ಹಾಗೂ ಮಾನವೀಯ ಮೌಲ್ಯ ಬೆಳೆಸುವ ಮೂಲಕ ಅವರ ಭವಿಷ್ಯವನ್ನು ರೂಪಿಸುವ ಶಿಕ್ಷಕರು ನಿಜವಾದ ಶಿಲ್ಪಿಗಳಾಗಿದ್ದಾರೆ ಎಂದು ಶ್ರೀ ಜಯ ದುರ್ಗ ಸೇವಾ ಚಾರಿಟಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಜೆ.ಮಂಜೇಗೌಡರು ತಿಳಿಸಿದರು.
ತಾಲ್ಲೂಕಿನ ಯಡವನಹಳ್ಳಿ. ಬಳ್ಳೂರು ಹಾಗೂ ನೆರಳೂರು ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆಂಥೆಮ್ ಬಯೋಸೈನ್ಸಸ್ ಸಂಸ್ಥೆ ಮತ್ತು ಶ್ರೀ ಜಯ ದುರ್ಗ ಸೇವಾ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಉಚಿತವಾಗಿ ಶಾಲಾ ಬ್ಯಾಗ್. ನೋಟ್ ಪುಸ್ತಕ ಸೇರಿದಂತೆ ಕಲಿಕಾ ಸಾಮಾಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಲ್ಲನ್ನು ಕೆತ್ತಿ ಸುಂದರ ಶಿಲ್ಪವನ್ನಾಗಿ ರೂಪಿಸುವ ಶಿಲ್ಪಿಯಂತೆ, ಶಿಕ್ಷಕರು ವಿದ್ಯಾರ್ಥಿಗಳ ಜ್ಞಾನ ಮತ್ತು ವ್ಯಕ್ತಿತ್ವವನ್ನು ರೂಪಿಸಿ ಸಮಾಜಕ್ಕೆ ಉತ್ತಮ ನಾಗರಿಕರನ್ನಾಗಿ ಬೆಳೆಸುತ್ತಾರೆ ಎಂದು ಹೇಳಿದರು.
ಸಮಾಜ ಸೇವಕ ಬಿ.ಎಸ್ ನೀಲಕಂಠಯ್ಯ ಮಾತನಾಡಿ,ಶಿಕ್ಷಕರು ಕೇವಲ ಪಠ್ಯಪುಸ್ತಕದ ಜ್ಞಾನವನ್ನು ಬೋಧಿಸುವವರಲ್ಲ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ, ಸಮಯಪಾಲನೆ,ಸಾಮಾಜಿಕ ಜವಾಬ್ದಾರಿ ಹಾಗೂ ದೇಶಪ್ರೇಮದಂತಹ ಮೌಲ್ಯಗಳನ್ನು ಬೆಳೆಸುವ ಮೂಲಕ ಅವರ ಜೀವನಕ್ಕೆ ದಿಕ್ಕು ತೋರಿಸುತ್ತಾರೆ ಎಂದರು.
ಈವತ್ತಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಕಡಿಮೆಯಾಗಿ ಸರ್ಕಾರಿ ಶಾಲೆಗಳು ಮುಚ್ಚುವಂತಹ ಪರಿಸ್ಥಿತಿ ಯಿದ್ದು.ಆಂಥೆಮ್ ಬಯೋಸೈನ್ಸಸ್ ಸಂಸ್ಥೆ ಮತ್ತು ಶ್ರೀ ಜಯ ದುರ್ಗ ಸೇವಾ ಚಾರಿಟಬಲ್ ಟ್ರಸ್ಟ್ ಸರ್ಕಾರಿ ಶಾಲೆಗಳ ಪ್ರಗತಿಗಾಗಿ ಉತ್ತಮವಾದ ಕೆಲಸವನ್ನು ಮಾಡುತ್ತಿದ್ದು ಪ್ರತಿಯೊಬ್ಬರು ಸಹ ಸರ್ಕಾರಿ ಶಾಲೆಗಳ ಪ್ರಗತಿಗೆ ಕೈಜೋಡಿಸಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿರ್ಮಾಪಕ ಸದಾನಂದ ಸ್ವಾಮಿ, ಶ್ರೀ ಜಯ ದುರ್ಗ ಸೇವಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹೆಚ್.ಜಯಲಷ್ಮೀ. ಚಂದಾಪುರ ಪುರಸಭೆ ಮಾಜಿ ಸದಸ್ಯೆ ಮಂಜುಳ ನೀಲಕಂಠಯ್ಯ. ಶಿಕ್ಷಣ ಸಂಯೋಜಕ ನಾರಾಯಣ್. ಯುವ ಮುಖಂಡರಾದ ಕ್ರಾಂತಿ ಮುನಿರಾಜು. ಕೇಶವರೆಡ್ಡಿ. ಅರುಣ್. ಸಂದೀಪ್ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಬಾಗವಹಿಸಿದ್ದರು.

































