
ಕಲಬುರಗಿ: ಜಿಲ್ಲೆಯ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈ ಬಿಟ್ಟಿರುವದನ್ನು ಖಂಡಿಸಿ ಶುಕ್ರವಾರ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದರು. ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ,ಭೀಮಾಶಂಕರ ಮಾಡಿಯಾಳ,ಎಂ.ಬಿ ಸಜ್ಜನ,ಮೌಲಾಮುಲ್ಲಾ,ಉಮಾಪತಿ ಪಾಟೀಲ,ನಾಗಯ್ಯಸ್ವಾಮಿ ಅವರು ಸೇರಿದಂತೆ ಅನೇಕರು ಪಾಲ್ಗೊಂಡರು






























