
ಗದಗ,ಆ.೨೯: ಸಮಾಜದಲ್ಲಿ ಸಮಾನತೆ, ಸಹೋದರತೆ ಹಾಗೂ ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಅವರು ಸಮಾಜಕ್ಕೆ ನೀಡಿದರು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ?೨೦೨೬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬ್ರಿಟಿಷರ ಆಡಳಿತದ ಸಂದರ್ಭದಲ್ಲಿ ಕೇರಳ ಹಾಗೂ ದಕ್ಷಿಣ ಕನ್ನಡ ಭಾಗಗಳಲ್ಲಿ ತೀವ್ರವಾಗಿದ್ದ ಅಸ್ಪöÈಶ್ಯತೆ, ಮೇಲು-ಕೀಳು ಹಾಗೂ ಜಾತಿ ತಾರತಮ್ಯದ ವಿರುದ್ಧ ನಾರಾಯಣಗುರುಗಳು ಹೋರಾಟ ನಡೆಸಿದರು. ಶೂದ್ರ ಸಮುದಾಯದಲ್ಲಿ ಜನಿಸಿದರೂ ಉನ್ನತ ಶಿಕ್ಷಣ ಪಡೆದು, ಸಮಾಜದ ಕಟ್ಟುಪಾಡುಗಳನ್ನು ಧಿಕ್ಕರಿಸಿ ಕೆಳವರ್ಗದ ಜನರಿಗೂ ಧಾರ್ಮಿಕ ಹಕ್ಕು ದೊರೆಯುವಂತೆ ದೇವಾಲಯಗಳನ್ನು ನಿರ್ಮಿಸುವ ಮೂಲಕ ಸಮಾನತೆಯ ಸಂದೇಶ ಸಾರಿದರು ಎಂದರು.
ಹುಟ್ಟುವಾಗ ಯಾರಿಗೂ ಜಾತಿ ಇರುವುದಿಲ್ಲ; ಸಮಾಜವೇ ಜಾತಿಯನ್ನು ಸೃಷ್ಟಿಸುತ್ತದೆ. ಎಲ್ಲರ ರಕ್ತದ ಬಣ್ಣ ಒಂದೇ' ಎಂಬ ನಾರಾಯಣಗುರುಗಳ ಚಿಂತನೆ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ. ಮಗುವಿನ ಮನಸ್ಸು ಹುಟ್ಟುವಾಗ ಶುದ್ಧವಾಗಿರುತ್ತದೆ. ಆದರೆ ಬೆಳೆಯುತ್ತಾ ಸಮಾಜದ ಕಟ್ಟುಪಾಡುಗಳಿಗೆ ಸಿಲುಕುತ್ತದೆ. ಇಂತಹ ಅಸಮಾನತೆಯಿಂದ ಹೊರಬಂದು ಮನುಷ್ಯತ್ವದಿಂದ ಬದುಕಲು ಮಹಾನ್ ದಾರ್ಶನಿಕರ ಚಿಂತನೆಗಳು ಪ್ರೇರಣೆ ನೀಡುತ್ತವೆ ಎಂದು ಹೇಳಿದರು. ನಾರಾಯಣಗುರುಗಳ ಜಯಂತಿ ಆಚರಣೆ ಕೇವಲ ಒಂದು ಕಾರ್ಯಕ್ರಮಕ್ಕೆ ಸೀಮಿತವಾಗದೆ, ಅವರ ಸಮಾನತೆ ಮತ್ತು ಮಾನವೀಯತೆಯ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರಣೆಯಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ಉಪನ್ಯಾಸಕ ಡಾ. ದತ್ತಪ್ರಸನ್ನ ಪಾಟೀಲ ಮಾತನಾಡಿ, ಅಸ್ಪöÈಶ್ಯತೆ ಹಾಗೂ ಸಾಮಾಜಿಕ ತಾರತಮ್ಯದ ವಿರುದ್ಧ ಅಹಿಂಸಾತ್ಮಕ ಹೋರಾಟ ನಡೆಸಿದ ನಾರಾಯಣಗುರುಗಳು ಸಾಮಾಜಿಕ ಮತ್ತು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದರು. ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ಅವರ ಧ್ಯೇಯವಾಕ್ಯ ಸಾರ್ವಕಾಲಿಕ ಪ್ರಸ್ತುತವಾಗಿದೆ ಎಂದರು.
ಕೇರಳದ ಅರುವಿಪುರಂನಲ್ಲಿ ನೆಯ್ಯಾರ್ ನದಿಯಿಂದ ಶಿಲೆ ತಂದು ಶಿವಲಿಂಗ ಪ್ರತಿಷ್ಠಾಪಿಸುವ ಮೂಲಕ ಧಾರ್ಮಿಕ ಆಚರಣೆಗಳ ಮೇಲಿನ ಕೆಲವರ ಏಕಸ್ವಾಮ್ಯವನ್ನು ಪ್ರಶ್ನಿಸಿ, ಕೆಳಸಮುದಾಯದವರಿಗೂ ಪೂಜಾ ಹಕ್ಕು ದೊರೆಯುವಂತೆ ಮಾಡಿದರು. ದೇವಸ್ಥಾನಗಳಲ್ಲಿ ಕನ್ನಡಿಗಳನ್ನು ಪ್ರತಿಷ್ಠಾಪಿಸುವ ಮೂಲಕ ದೇವರು ಪ್ರತಿಯೊಬ್ಬರಲ್ಲಿಯೂ ಇದ್ದಾನೆ ಎಂಬ ಅದ್ವೆöÊತ ತತ್ವವನ್ನು ಜನಸಾಮಾನ್ಯರಿಗೆ ಪರಿಚಯಿಸಿದರು ಎಂದು ವಿವರಿಸಿದರು.
ತಳ ಸಮುದಾಯದವರು ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂಬ ಉದ್ದೇಶದಿಂದ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ ಸಂಸ್ಥೆ ಸ್ಥಾಪಿಸಿ, ಶಾಲಾ-ಕಾಲೇಜುಗಳ ನಿರ್ಮಾಣಕ್ಕೆ ಉತ್ತೇಜನ ನೀಡಿದರು. ಬಾಲ್ಯ ವಿವಾಹ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ವಿರೋಧಿಸಿ, ಸರಳ ವಿವಾಹಕ್ಕೆ ಒತ್ತು ನೀಡುವಂತೆ ಸಮಾಜಕ್ಕೆ ಕರೆ ನೀಡಿದ್ದರು ಎಂದರು.
ಅಸ್ಪöÈಶ್ಯರಿಗೆ ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸಲು ಹಾಗೂ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲದ ಕಾಲದಲ್ಲಿ ನಡೆದ ವೈಕಂ ಸತ್ಯಾಗ್ರಹ ಸೇರಿದಂತೆ ಸಾಮಾಜಿಕ ಸಮಾನತೆಗಾಗಿ ನಡೆದ ಹೋರಾಟಗಳಿಗೆ ನಾರಾಯಣಗುರುಗಳು ಬೆಂಬಲ ನೀಡಿದ್ದರು. ದಲಿತರು ಹಾಗೂ ಹಿಂದುಳಿದ ವರ್ಗದವರಿಗೆ ಸಮಾನ ಹಕ್ಕುಗಳನ್ನು ದೊರಕಿಸಿಕೊಡುವಲ್ಲಿ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಡಾ. ದತ್ತಪ್ರಸನ್ನ ಪಾಟೀಲ ಉಪನ್ಯಾಸ ನೀಡಿದರು.
ವಿದ್ಯಾರ್ಥಿಗಳು, ಕ್ರೀಡಾಪಟುಗಳಿಗೆ ಸನ್ಮಾನ
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ಕ್ರೀಡಾಕೂಟಗಳಲ್ಲಿ ವಿಜೇತರಾದ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಾಬರ್ಚಿ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ವಿ. ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ.ನಂದ ಹಣ್ಣಬರಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.






























