Home ಜಿಲ್ಲೆ ಕಲಬುರಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ವಿ.ಕೃ. ಗೋಕಾಕರ ಕುರಿತು ಉಪನ್ಯಾಸ

ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ವಿ.ಕೃ. ಗೋಕಾಕರ ಕುರಿತು ಉಪನ್ಯಾಸ

ಜೇವರ್ಗಿ : ಕನ್ನಡದ ಮಹತ್ವದ ಲೇಖಕರಲ್ಲಿ ವಿ. ಕೃ ಗೋಕಾಕರ ಹೆಸರು ಚಿರಸ್ಮರಣೀಯ ವಾಗಿದೆ. ಕನ್ನಡ ಸಾರಸ್ವತ ಲೋಕ ವನ್ನು ಶ್ರೀಮಂತ ಗೊಳಿಸಿದ್ದಾರೆ. ಅವರ ಕುರಿತು ವಿಸ್ತೃತ ಚಿಂತನ ಮಂಥನ ನಡೆಯ ಬೇಕಾಗಿದೆ ಎಂದು ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ದತ್ತಿ ದಾಸೋಹಿ ಡಾ. ಟಿ. ಎಂ ಭಾಸ್ಕರ್ ಅಭಿಪ್ರಾಯ ಪಟ್ಟರು.
ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲ್ಲಿಕಲಬುರಗಿಯ ಕನ್ನಡ ನಾಡು ಲೇಖಕರ ಹಾಗೂ ಓದುಗರ ಸಹಕಾರ ಸಂಘ ಮತ್ತು ಜೇವರ್ಗಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಯೋಗ ದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ವಿ.ಕೃ. ಗೋಕಾಕರ ಕುರಿತು ಆಯೋಜಿಸಿದ್ದ ದತ್ತಿ ಉಪನ್ಯಾಸಕದಲ್ಲಿ ಮಾತನಾಡಿದರು.
ವಿ. ಕೃ. ಗೋಕಾಕರ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ವಿಶ್ರಾಂತ ಪ್ರಾಧ್ಯಾಪಕ ಡಾ. ಶ್ರೀಶೈಲ ನಾಗರಾಳ ಮಾತನಾಡಿ, ಗೋಕಾಕರು ತಮ್ಮ ಕಾವ್ಯಯಾನ ಪ್ರಾರಂಭಿ ಸಿದ್ದು ನವೋದಯದಿಂದ ಆದರೂ ಅವರು ನವ್ಯದ ಹೊಸ ಮಾರ್ಗವನ್ನು ಹುಟ್ಟು ಹಾಕಿದರು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ರಾದ ಪೆÇ್ರ. ಶಾಂತಾ ಬಿ.ಅಸ್ಟಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ನಾಡು ಲೇಖಕರ ಹಾಗೂ ಓದುಗರ ಸಹಕಾರ ಸಂಘದ ಅಧ್ಯಕ್ಷರಾದ ಅಪ್ಪಾರಾವ್ ಅಕ್ಕೋಣಿ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ನಾಡು ಲೇಖಕರ ಹಾಗೂ ಓದುಗರ ಸಹಕಾರ ಸಂಘದ ಉಪಾಧ್ಯಕ್ಷರಾದ ಡಾ. ಸ್ವಾಮಿರಾವ್ ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿ ದರು. ಈ ಸಂದರ್ಭದಲ್ಲಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್ ಕೆ ಬಿರಾದಾರ್, ಕನ್ನಡ ವಿಭಾಗದ ಮುಖ್ಯಸ್ಥ ನಾಗಣ್ಣ ಕಿಲಾರಿ ಉಪಸ್ಥಿತರಿದ್ದರು. ಕನ್ನಡ ಅಧ್ಯಾಪಕ ಡಾ. ಖಾಜಾವಲಿ ಈಚನಾಳ ಸ್ವಾಗತಿಸಿದರು. ಕನ್ನಡ ಅಧ್ಯಾಪಕ ಭೀಮಣ್ಣ ಬೆಡ್ಕಪಳ್ಳಿ ನಿರೂಪಿಸಿದರೆ, ಕನ್ನಡ ಉಪನ್ಯಾಸಕ ಡಾ. ಮಲ್ಲಿಕಾರ್ಜುನ ಹೂಗಾರ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಅಧ್ಯಾಪಕರು ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.