
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಲಕ್ಷೆ÷್ಮÃಶ್ವರ ಪಟ್ಟಣಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸಮಗ್ರ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಗದಗ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಮತ್ತು ಶಿರಹಟ್ಟಿ ವಿಧಾನಸಭಾ ಕ್ಷೇತ್ರಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಸಮಗ್ರ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ ಮಾಗಡಿ, ಹೊನ್ನಪ್ಪ ವಡ್ಡರ, ನಾಗರಾಜ್ ಚಿಂಚಲಿ, ಚಂದ್ರು ಮಾಗಡಿ ಸೇರಿದಂತೆ ಅನೇಕರಿದ್ದರು.


































