Home ಜಿಲ್ಲೆ ಕಲಬುರಗಿ ವಿಶ್ವಕರ್ಮರ ಆರಾಧ್ಯ ದೇವತೆ ಕಾಳಿಕಾದೇವಿ ದೇವಸ್ಥಾನಕ್ಕೆ 5 ಲಕ್ಷ

ವಿಶ್ವಕರ್ಮರ ಆರಾಧ್ಯ ದೇವತೆ ಕಾಳಿಕಾದೇವಿ ದೇವಸ್ಥಾನಕ್ಕೆ 5 ಲಕ್ಷ

ಆಳಂದ : ಪಟ್ಟಣದ ಆದಿದೇವತೆ ಹಾಗೂ ವಿಶ್ವಕರ್ಮ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಿಕಾದೇವಿ ದೇವಸ್ಥಾನದ ಗರ್ಭಗುಡಿಯ ನೂತನ ದ್ವಾರಬಾಗಿಲು ಸ್ಥಾಪನಾ ಕಾರ್ಯಕ್ರಮವು ಧಾರ್ಮಿಕ ಶ್ರದ್ಧೆ ಹಾಗೂ ಭಕ್ತಿಭಾವದೊಂದಿಗೆ ನೆರವೇರಿತು. ಇದೇ ಸಂದರ್ಭದಲ್ಲಿ ದೇವಸ್ಥಾನದ ನಿರ್ಮಾಣ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಖ್ಯಾತ ಉದ್ಯಮಿ ಶ್ರೀಶೈಲ ಎಸ್. ಸುತಾರ ಅವರು ?5 ಲಕ್ಷ ದೇಣಿಗೆ ನೀಡುವುದಾಗಿ ಘೋಷಿಸುವ ಮೂಲಕ ಸಮಾಜಮುಖಿ ಸೇವಾ ಬದ್ಧತೆಯನ್ನು ಮೆರೆದರು.

ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಪ್ರಣವನಿರಂಜನ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ವಿಶ್ವಕರ್ಮ ಸಮುದಾಯದ ಆರಾಧ್ಯ ದೇವತೆಯಾದ ಕಾಳಿಕಾಮಾತೆಯ ಶಕ್ತಿ ಹಾಗೂ ಮಹಿಮೆ ಅಪಾರವಾಗಿದೆ. ಕಾಳಿಕಾಮಾತೆಯ ಸೇವೆಯಲ್ಲಿ ಪಂಚ ಕುಲಕಸುಬುದಾರರು ಭೇದಭಾವ ಮರೆತು ಒಗ್ಗಟ್ಟಿನಿಂದ ಪಾಲ್ಗೊಳ್ಳಬೇಕು. ಧಾರ್ಮಿಕ ಪರಂಪರೆಯ ಸಂರಕ್ಷಣೆಯೊಂದಿಗೆ ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಗೆ ಸಂಘಟಿತ ಪ್ರಯತ್ನ ಅಗತ್ಯ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಶೈಲ ಎಸ್. ಸುತಾರ, ವಿಶ್ವಕರ್ಮರು ತಮ್ಮ ಅಪೂರ್ವ ಕರಕುಶಲ ಕೌಶಲ್ಯ, ಸೃಜನಶೀಲತೆ ಹಾಗೂ ಕಲಾ ಪ್ರತಿಭೆಯ ಮೂಲಕ ಸಮಾಜದ ನಾಗರಿಕತೆ ಮತ್ತು ವಿಶ್ವ ಸೌಂದರ್ಯ ನಿರ್ಮಾಣಕ್ಕೆ ಶತಮಾನಗಳಿಂದ ಮಹತ್ವದ ಕೊಡುಗೆ ನೀಡಿದ್ದಾರೆ. ಇಂತಹ ಶ್ರೀಮಂತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವಿಶ್ವಕರ್ಮರು ಇನ್ನಷ್ಟು ಸಂಘಟಿತರಾಗಿ, ಶಿಕ್ಷಣ, ಉದ್ಯೋಗ, ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರಗತಿಯ ಹೆಜ್ಜೆ ಇಡಬೇಕು ಎಂದು ಹೇಳಿದರು.
ಕಾಳಿಕಾದೇವಿ ದೇವಸ್ಥಾನವು ಕೇವಲ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿರದೆ, ವಿಶ್ವಕರ್ಮ ಸಮುದಾಯದ ಐಕ್ಯತೆ, ಸಂಸ್ಕøತಿ ಮತ್ತು ಪರಂಪರೆಯ ಪ್ರತೀಕವಾಗಿ ಬೆಳೆಯಬೇಕು ಎಂಬ ಆಶಯ ವ್ಯಕ್ತಪಡಿಸಿದ ಅವರು, ದೇವಸ್ಥಾನದ ಕಟ್ಟಡ ನಿರ್ಮಾಣ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ?5 ಲಕ್ಷ ದೇಣಿಗೆ ನೀಡುವುದಾಗಿ ಘೋಷಿಸಿದರು.
ಶ್ರೀಶೈಲ ಸುತಾರ ಅವರ ಈ ಉದಾತ್ತ ಸೇವಾ ಸಂಕಲ್ಪಕ್ಕೆ ಸಮಾಜದ ಮುಖಂಡರು, ಗಣ್ಯರು ಹಾಗೂ ಭಕ್ತರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಾಳಿಕಾದೇವಿ ಟ್ರಸ್ಟ್ ಕಮಿಟಿಯ ಅಧ್ಯಕ್ಷ ಮಹಾದೇವ ಪೆÇದ್ದಾರ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ವಿಶ್ವಕರ್ಮ, ಶ್ರೀ ಮೌನೇಶ್ವರ ಟ್ರಸ್ಟ್ ಕಮಿಟಿಯ ಅಧ್ಯಕ್ಷ ರಘುವೀರ ಸೋನಾರ, ಮನೋಹರ ಸೋನಾರ, ವೀರೇಶ ಪೆÇದ್ದಾರ, ಅಶೋಕ ಪೆÇದ್ದಾರ ಸೇರಿದಂತೆ ಅನೇಕ ಗಣ್ಯರು, ಸಮಾಜದ ಮುಖಂಡರು ಹಾಗೂ ಭಕ್ತರು ಉಪಸ್ಥಿತರಿದ್ದರು.