
ಸೇಡಂ,ಸೆ,02: ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ಕಾಂಗ್ರೆಸ್ ಪಕ್ಷವು ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ ತರುವುದಾಗಿ ಜೊತೆಗೆ ನಿರಂತರ ಅಭಿವೃದ್ಧಿಗೆ ಕೊರತೆ ಇರುವುದಿಲ್ಲ ಎಂದು ಮಾತು ಕೊಟ್ಟಿದ್ದೇವೆ ಅದರಂತೆ ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿಯೇ ತಾಲೂಕು ಮಟ್ಟದಲ್ಲಿ ಸೇಡಂ ತಾಲೂಕಿನಲ್ಲಿ ಹಳ್ಳಿಯಿಂದ ನಗರದವರೆಗೂ ಎಲ್ಲಾ ರೀತಿಯ ಸೌಲಭ್ಯಗಳು ಒದಗಿಸಲು ಹಲವಾರು ಯೋಜನೆಗಳು ತಾಲೂಕಿನ ಜನರಿಗೆ ನಿರಂತರ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ನಡೆಯುತ್ತಿವೆ, ಗ್ಯಾರಂಟಿಗಳಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ ಎಂಬ ವಿರೋಧ ಪಕ್ಷದ ನಾಯಕರು ಸೇಡಂ ಗೆ ಬಂದು ನೋಡಲಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ಬಹಿರಂಗವಾಗಿ ಸವಾಲ್ ಹಾಕಿದರು.
ನಗರದಲ್ಲಿರುವ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ 5 ಕೋಟಿ ವೆಚ್ಚದಲ್ಲಿ ಓಪಿಡಿ ಬ್ಲಾಕ್ ಕಟ್ಟಡದ ಹಾಗೂ 50 ಲಕ್ಷ ವೆಚ್ಚದಲ್ಲಿ ಬಿಪಿಎಚ್ ಯು ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಬಡವರು ಯಾವುದೇ ರೀತಿ ಖಾಸಗಿ ಆಸ್ಪತ್ರೆಗೆ ತೆರಳಿ ಲಕ್ಷಾಂತರ ರೂಪಾಯಿ ಕಳೆದುಕೊಳ್ಳುವುದಕ್ಕೆ ನಮ್ಮ ಸರ್ಕಾರ ಬಿಡುವುದಿಲ್ಲ ಆದ್ದರಿಂದ ಬಡವರಿಗಾಗಿಯೇ ಎಲ್ಲಾ ರೀತಿಯ ಸೌಲಭ್ಯಗಳನ್ನು ಒಳಗೊಂಡ ಸರ್ಕಾರ ಆಸ್ಪತ್ರೆಗಳಲ್ಲಿ ಸಿಗುವಂತಹ ಪ್ರಯತ್ನ ನಮ್ಮ ಸರ್ಕಾರ ಮಾಡುತ್ತಿದೆ ಬಡವರು ಇದರ ಸದುಪಯೋಗ ಮಾಡಿಕೊಳ್ಳಬೇಕು. ಎಂದರು. ಈ ವೇಳೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗೇಶ್ವರರಾವ ಮಾಲಿಪಾಟೀಲ್,ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಸವರಾಜ ಪಾಟೀಲ ಊಡಗಿ,ಗ್ಯಾರಂಟಿಗಳ ಅನುಷ್ಠಾನ ಸಮಿತಿ ತಾಲೂಕಾ ಅಧ್ಯಕ್ಷರಾದ ಶಿವಶರಣರೆಡ್ಡಿ ಪಾಟೀಲ್,ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿಶ್ವನಾಥ ಪಾಟೀಲ್ ಬೊಮ್ನಳ್ಳಿ,ಅಲ್ಪಾಟೆಕ್ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸತೀಶರೆಡ್ಡಿ ರಂಜೋಳ,ತಹಶೀಲ್ದಾರ್ ಶ್ರೀಯಾಂಕಾ ಧನಶ್ರೀ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನಾಗರಾಜ ಮನ್ನೆ, ಆರೋಗ್ಯ ಇಲಾಖೆಯ ಎಇಇ ಸೋಮಶೇಖರ್ ಪೂಜಾರಿ,ಟಿಎಚ್‍ಒ ಡಾ.ಸಂಜೀವಕುಮಾರ ಪಾಟೀಲ್, ಗುತ್ತಿಗೆದಾರ ಜಟ್ಟೆಪ್ಪ ಪೂಜಾರಿ, ಶ್ರೀನಿವಾಸ ದೇಶಪಾಂಡೆ, ಜಗನ್ನಾಥ
ಚಿಂತಪಳ್ಳಿ, ಸತೀಶ ಪೂಜಾರಿ,ಇದ್ದರು





























