Home ಜಿಲ್ಲೆ ಕಲಬುರಗಿ ಇಂಡಿಯಾ ಟುಡೇ ಶ್ರೇಯಾಂಕ : ಸಿಯುಕೆಗೆ 36ನೇ ಸ್ಥಾನ

ಇಂಡಿಯಾ ಟುಡೇ ಶ್ರೇಯಾಂಕ : ಸಿಯುಕೆಗೆ 36ನೇ ಸ್ಥಾನ

ಕಲಬುರಗಿ,ಸೆ.2: ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯವು (ಸಿಯುಕೆ) ಪ್ರತಿಷ್ಠಿತ ಇಂಡಿಯಾ ಟುಡೇ ಶ್ರೇಯಾಂಕ 2026ರ ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ 36ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ. ಕಳೆದ ಮೂರು ವರ್ಷಗಳಲ್ಲಿ ವಿಶ್ವವಿದ್ಯಾಲಯವು ಶ್ರೇಯಾಂಕದಲ್ಲಿ ಸ್ಥಿರವಾದ ಪ್ರಗತಿ ದಾಖಲಿಸಿದ್ದು, 2024ರಲ್ಲಿ 38ನೇ ಸ್ಥಾನ, 2025ರಲ್ಲಿ 39ನೇ ಸ್ಥಾನ ಪಡೆದಿದ್ದ ಸಿಯುಕೆ, ಇದೀಗ 2026ರಲ್ಲಿ 36ನೇ ಸ್ಥಾನಕ್ಕೆ ಏರಿಕೆಯಾಗಿದೆ.
ಇಂಡಿಯಾ ಟುಡೇ ಗ್ರೂಪ್ ನಡೆಸುವ ವಾರ್ಷಿಕ ಉನ್ನತ ಶಿಕ್ಷಣ ಸಮೀಕ್ಷೆಯಲ್ಲಿ ವಿಶ್ವವಿದ್ಯಾಲಯಗಳ ಕಾರ್ಯಕ್ಷಮತೆಯನ್ನು ವಿವಿಧ ಪ್ರಮುಖ ಮಾನದಂಡಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಲಾಗುತ್ತದೆ. ವಿಶ್ವವಿದ್ಯಾಲಯದ ಪ್ರತಿಷ್ಠೆ ಮತ್ತು ಆಡಳಿತ, ಶೈಕ್ಷಣಿಕ ಹಾಗೂ ಸಂಶೋಧನಾ ಶ್ರೇಷ್ಠತೆ, ಮೂಲಸೌಕರ್ಯ ಮತ್ತು ವ್ಯಕ್ತಿತ್ವ ಹಾಗೂ ನಾಯಕತ್ವ ವಿಕಸನ, ವೃತ್ತಿಯ ಪ್ರಗತಿ ಮತ್ತು ಉದ್ಯೋಗಾವಕಾಶಗಳು ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಶ್ರೇಯಾಂಕ ನೀಡಲಾಗುತ್ತದೆ.
ಸಿಯುಕೆಯ ಸುಧಾರಿತ ಶ್ರೇಯಾಂಕವು ಶೈಕ್ಷಣಿಕ ಗುಣಮಟ್ಟ, ಸಂಶೋಧನೆ, ನಾವೀನ್ಯತೆ, ಮೂಲಸೌಕರ್ಯ ಅಭಿವೃದ್ಧಿ, ವಿದ್ಯಾರ್ಥಿ ಕೇಂದ್ರಿತ ಕಾರ್ಯಕ್ರಮಗಳು ಹಾಗೂ ಸಾಂಸ್ಥಿಕ ಬೆಳವಣಿಗೆಗೆ ವಿಶ್ವವಿದ್ಯಾಲಯ ನೀಡುತ್ತಿರುವ ನಿರಂತರ ಆದ್ಯತೆಯನ್ನು ಪ್ರತಿಬಿಂಬಿಸುತ್ತದೆ. ಬೋಧನೆ ಮತ್ತು ಕಲಿಕಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ ಸಂಶೋಧನೆ ಹಾಗೂ ನಾವೀನ್ಯತೆಗೆ ಉತ್ತೇಜನ ನೀಡುವ ಸಿಯುಕೆಯ ನಿರಂತರ ಪ್ರಯತ್ನಗಳಿಗೆ ಈ ಸಾಧನೆ ಮತ್ತಷ್ಟು ಪ್ರೇರಣೆ ನೀಡಿದೆ. ದೇಶದ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಗಳ ಪೈಕಿ ಸಿಯುಕೆಯ ಸ್ಥಾನಮಾನವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಸಾಧನೆ ಮಹತ್ವದ ಉತ್ತೇಜನ ನೀಡಿದೆ.
ಕುಲಸಚಿವ ಪೆÇ್ರ. ಆರ್. ಆರ್. ಬಿರಾದಾರ್ ಅವರು ಸಹ ಈ ಸಂದರ್ಭದಲ್ಲಿ ವಿ.ವಿ.ಯ ಸಾಧನೆಗೆ ಸಂತಸ ವ್ಯಕ್ತಪಡಿಸಿ, ಇದು ತಂಡದ ಸಾಮೂಹಿಕ ಪ್ರಯತ್ನವಾಗಿದೆ. ಸಾಂಸ್ಥಿಕ ಬದ್ಧತೆ ಹಾಗೂ ಶ್ರೇಷ್ಠತೆಯತ್ತ ನಿರಂತರ ಪ್ರಯತ್ನಗಳ ಪ್ರತಿಫಲವಾಗಿದೆ. ಸುಧಾರಿತ ಶ್ರೇಯಾಂಕವು ಸಿಯುಕೆಯ ಶೈಕ್ಷಣಿಕ ಶ್ರೇಷ್ಠತೆ, ಸಾಂಸ್ಥಿಕ ಉತ್ಕøಷ್ಟತೆ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಗುರುತಿಸಿಕೊಳ್ಳುವತ್ತ ಸಾಗುತ್ತಿರುವ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಹೇಳಿದ್ದಾರೆ.
ಇಂಡಿಯಾ ಟುಡೇ ಶ್ರೇಯಾಂಕಕ್ಕಾಗಿ ವಿಶ್ವವಿದ್ಯಾಲಯದ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ, ಪರಿಶೀಲಿಸಿ, ಕ್ರೋಢೀಕರಿಸಿ ಹಾಗೂ ಇಂಡಿಯಾ ಟುಡೇ ಶ್ರೇಯಾಂಕ ಸಂಸ್ಥೆಗೆ ಸಮರ್ಪಕವಾಗಿ ಸಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ವಿ.ವಿ.ಯ ಆಂತರಿಕ ಗುಣಮಟ್ಟ ಭರವಸೆ ಕೋಶದ ನಿರ್ದೇಶಕ ಪೆÇ್ರ. ಅಮರೇಂದ್ರ ಮತ್ಸ ಹಾಗೂ ವಿಶ್ವವಿದ್ಯಾಲಯದ ಶ್ರೇಯಾಂಕ ಸಂಯೋಜಕ ಡಾ. ಗುರುರಾಜ್ ಮುಕರಂಬಿ ಅವರ ಸಮರ್ಪಿತ ಪ್ರಯತ್ನಗಳನ್ನು ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಅವರು ವಿಶೇಷವಾಗಿ ಶ್ಲಾಘಿಸಿದ್ದಾರೆ.


ಇದು ವಿಶ್ವವಿದ್ಯಾಲಯದ ಸಾಮೂಹಿಕ ಪ್ರಯತ್ನ, ಸಮರ್ಪಣೆ ಮತ್ತು ಬದ್ಧತೆಯ ಫಲವಾಗಿದೆ. ಈ ಸಾಧನೆಯು ನಮ್ಮ ವಿ.ವಿಗೆ ಹೆಮ್ಮೆಯ ಸಂಗತಿಯಾಗಿದ್ದು, ಶೈಕ್ಷಣಿಕ ಶ್ರೇಷ್ಠತೆಯತ್ತ ನಾವು ನಿರಂತರವಾಗಿ ಸಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಈ ರಾಷ್ಟ್ರೀಯ ಮನ್ನಣೆಯು ಬೋಧನೆ, ಸಂಶೋಧನೆ, ನಾವೀನ್ಯತೆ ಮತ್ತು ಸಮಾಜದೊಂದಿಗೆ ಅರ್ಥಪೂರ್ಣವಾಗಿ ತೊಡಗಿಸಿಕೊಳ್ಳುವಿಕೆಯಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡಲು ನಮಗೆ ಪ್ರೇರಣೆ ನೀಡುತ್ತದೆ. ದೇಶದ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಗಳ ಪೈಕಿ ಸಿಯುಕೆಯ ಸ್ಥಾನವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಾವು ಮುಂದುವರಿಯುತ್ತಿದ್ದೇವೆ.
-ಸಿಯುಕೆ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ