
ಕಲಬುರಗಿ: ನಗರದ ಜಿಪಂ ಹೊಸ ಸಭಾಂಗಣದಲ್ಲಿಂದು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಟ್ಟದ ಉನ್ನತ ಸಮಿತಿ (ಜೀತ ವಿಮುಕ್ತರ ಪುನರ್ವಸತಿ ಯೋಜನೆ), ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮಾನವ ಕಳ್ಳ ಸಾಗಾಣಿಕೆ ತಡೆ ಹಾಗೂ ಜೀತ ಪದ್ಧತಿ ನಿರ್ಮೂಲನೆ ಕುರಿತ ಕಾರ್ಯಾಗಾರವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಅವರು ಉದ್ಘಾಟಿಸಿದರು.ರಾಜ್ಯಮಟ್ಟದ ಉನ್ನತ ಸಮಿತಿ (ಜೀತ ವಿಮುಕ್ತರ ಪುನರ್ವಸತಿ ಯೋಜನೆ) ಸದಸ್ಯ ವಿಲಿಯಂ ಕ್ರಿಸ್ಟೋಫರ್ , ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ್, ಡಿಸಿಪಿ ಪ್ರವೀಣ ನಾಯಕ್,ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ವಿಶ್ವರಾಧ್ಯ ಇಜೇರಿ,ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ ಅವರು ಸೇರಿದಂತೆ ಹಲವರು ಪಾಲ್ಗೊಂಡರು.






























