Home ಜಿಲ್ಲೆ ಮೈಸೂರು ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮಕ್ಕೆ ಶಾಸಕ ಚಾಲನೆ

ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮಕ್ಕೆ ಶಾಸಕ ಚಾಲನೆ

ಸಂಜೆವಾಣಿ ವಾರ್ತೆ
ಕೆ.ಆರ್.ನಗರ, ಸೆ.06:-
ರಾಜ್ಯಾದ್ಯಂತ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮವನ್ನು ಇಂದಿನಿಂದ ಜಾರಿಗೆ ಸರ್ಕಾರ ತರಲಾಗಿದ್ದು ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕುಗಳ ಅಧಿಕಾರಿಗಳೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿ ಜನರ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಶ್ರೀ ಸಾಯಿ ಕನ್ವೆನ್ಷನ್ ಹಾಲ್ ನಲ್ಲಿ ಸಾಲಿಗ್ರಾಮ ಮತ್ತು ಕೆ.ಆರ್. ನಗರ ಆವಳಿ ತಾಲೂಕು ಆಡಳಿತ ವತಿಯಿಂದ ಶಾಸಕರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ‘ಪ್ರಜಾ ಸೇವೆ ಆಂದೋಲನ’ ಸಭೆಗೆ ಚಾಲನೆ ನೀಡಿ ಮಾತನಾಡಿದ ಶಾಸಕರು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಪ್ರತಿ ತಿಂಗಳ ಒಂದನೇ ಮತ್ತು ಮೂರನೇ ಶನಿವಾರ ತಾಲೂಕು ಮಟ್ಟದಲ್ಲಿ ಪ್ರಜಾ ಸೇವೆ ಆಂದೋಲನ ಸಭೆಗಳನ್ನು ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.


ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮದ ಮುಖ್ಯ ಉದ್ದೇಶ ಸಾರ್ವಜನಿಕರಿಗಾಗಿ ಆಯೋಜಿಸಿದ್ದು ಸಾರ್ವಜನಿಕರ ಸಮಸ್ಯೆಗಳು ಹಾಗೂ ಅಹವಾಲಗಳನ್ನು ಆಲಿಸಿ, ಸ್ಥಳದಲ್ಲಿ ಸೂಕ್ತ ಪರಿಹಾರವನ್ನು ಒದಗಿಸುವುದರ ಜೊತೆಗೆ ತ್ವರಿತಗತಿಯಲ್ಲಿ ಅವರ ಸಮಸ್ಯೆಗಳನ್ನು ನಿವಾರಣೆ ಮಾಡುವ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿದ್ದು ಪ್ರತಿ ಶನಿವಾರ ಈ ಕಾರ್ಯಕ್ರಮ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಹೋಬಳಿ ಕೇಂದ್ರ ಸ್ಥಾನದ ಗ್ರಾಮಗಳಲ್ಲಿ ನಡೆಯಲಿದೆ ಎಂದರು.
ದಿನ ನಿತ್ಯಾ ಜನರು ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳನ್ನು ಹೇಳಿಕೊಂಡಿದ್ದು, ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಗಮನಹರಿಸುವಂತೆ ಸೂಚನೆ ನೀಡಲಾಗಿದೆ ಎಂದರಲ್ಲದೆ ಕುಡಿಯುವ ನೀರಿನ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು ಇದನ್ನು ತ್ವರಿತಗತಿಯಲ್ಲಿ ನಿವಾರಿಸಬೇಕೆಂದು ಅಧಿಕಾರಿಗಳಿಗೆ ಖಡಕ್ಕಾಗಿ ತಿಳಿಸಿದರು.


ಪಿಂಚಣಿ ಸೇವೆ, ಸಂಧ್ಯಾ ಸುರಕ್ಷಾ ಮತ್ತು ವಿಧವಾ ವೇತನ, ವಿಶೇಷ ಚೇತನರ ಯೋಜನೆಗಳು, ಕಂದಾಯ ಸಮಸ್ಯೆಗಳು, ಗ್ಯಾರಂಟಿ ಯೋಜನೆಗಳ ಸೌಲಭ್ಯ, ಹೊಸ ಪಡಿತರ ಚೀಟಿ, ರಸ್ತೆ, ಕುಡಿಯುವ ನೀರು, ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಅಭಿವೃದ್ಧಿ, ಪೆÇಲೀಸ್ ಇಲಾಖೆ ಸೇವೆ, ನೀರಾವರಿ ಯೋಜನೆ ಸೇರಿದಂತೆ ಹತ್ತು ಹಲವು ಯೋಜನೆಗಳು ಹಾಗೂ ಸಮಸ್ಯೆಗಳಿಗೆ ತಾಲೂಕು ಆಡಳಿತ, ಗ್ರಾಮೀಣ ಪಂಚಾಯತ್ ರಾಜ್ ಇಲಾಖೆ ಹಾಗೂ ವಿವಿದ ಇಲಾಖೆಗಳ ಸಹಕಾರದೊಂದಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.


ತಹಸೀಲ್ದಾರ್ ಜಿ.ಸುರೇಂದ್ರ ಮೂರ್ತಿ ಮಾತನಾಡಿ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮವನ್ನು ಇಂದು ಆವಳಿ ತಾಲೂಕಿನ ಕೇಂದ್ರ ಬಿಂದುವಾಗಿರುವ ಕೆ.ಆರ್.ನಗರ ಪಟ್ಟಣದಲ್ಲಿ ಎರಡು ಆಯೋಜಿಸಿದ್ದು ಇನ್ನು ಮುಂದೆ ಪ್ರತಿ ಶನಿವಾರ ತಾಲೂಕು ಮಟ್ಟದಲ್ಲಿ ಹಾಗೂ ಹೋಬಳಿ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು. ಸದರಿ ಸಭೆಗಳಲ್ಲಿ ಇಲಾಖಾವಾರು ಅರ್ಜಿ ಸ್ವೀಕೃತಿ ಕೌಂಟರ್ ಗಳನ್ನು ಸ್ಥಾಪಿಸಿ, ಅಹವಾಲನ್ನ ಸ್ವೀಕರಿಸಿ ಸಮಸ್ಯೆ ಬಗೆಹರಿಸಲು ಕ್ರಮವಹಿಸಲಾಗುವುದು ಎಂದರು.


ಇದೇ ವೇಳೆನ ಕೆ.ಆರ್.ನಗರ ಕಂದಾಯ ಇಲಾಖೆ ಪಿಂಚಣಿ ಫಲಾನುಭವಿಗಳು 12 ಮಂದಿ, ಸಾಲಿಗ್ರಾಮ ಕಂದಾಯ ಇಲಾಖೆ ಪಿಂಚಣಿ ಫಲಾನುಭವಿಗಳು 11ಮಂದಿ, ಕಾರ್ಮಿಕ ಇಲಾಖೆ ವತಿಯಿಂದ ಮದುವೆ ಧನ ಸಹಾಯಕ ಫಲಾನುಭವಿಗಳು ಇಬ್ಬರು, ಪಿಂಚಣಿ ಧನ ಸಹಾಯ ಫಲಾನುಭವಿಗಳು ಇಬ್ಬರು, ಅನುಗ್ರಹ ರಾಶಿ ಹಾಗೂ ಶವಸಂಸ್ಕಾರ ವೆಚ್ಚ ಧನಸಹಾಯ ಪಲಾನುಭವಿ ಒಬ್ಬರು, ಸುಕನ್ಯ ಸಮೃದ್ಧಿ ಯೋಜನೆ ಪಡೆದ ಏಳು ಮಕ್ಕಳಿಗೆ ಸ್ಥಳದಲ್ಲಿ ಪಾಸ್ ಪುಸ್ತಕ ವಿತರಣೆ ಮಾಡಲಾಯಿತು.
ಸಾಲಿಗ್ರಾಮ ತಹಸೀಲ್ದಾರ್ ರುಕೀಯಾ ಬೇಗಂ, ತಾ.ಪಂ.ಇಓಗಳಾದ ವಿ.ಪಿ.ಕುಲದೀಪ್, ಎ.ಎನ್.ರವಿ, ಪೆÇಲೀಸ್ ಇನ್ಸ್ ಪೆಕ್ಟರ್ ಶಿವಪ್ರಕಾಶ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಂ.ಎಸ್.ಮಹದೇವ್ ,ಉದಯ್ ಶಂಕರ್, ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕ ಸೈಯ ಜಾಬೀರ್, ಕೆ.ಎನ್.ಪ್ರಸನ್ನ,
ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ. ಸಂತೋಷ್, ವಿವಿಧ ಇಲಾಖೆ ಅಧಿಕಾರಿಗಳು, ರೈತ ಸಂಘಟನೆಯ ಮುಖ್ಯಸ್ಥರು, ಸಾರ್ವಜನಿಕರು ಹಾಜರಿದ್ದರು.