Home ಜಿಲ್ಲೆ ಕಲಬುರಗಿ ಶಿಕ್ಷಕರು ಸೈನಿಕರಂತೆ ಕಾರ್ಯನಿರ್ವಹಿಸಬೇಕು:ಸಿದ್ಧಲಿಂಗ ಮಲಶೆಟ್ಟಿ

ಶಿಕ್ಷಕರು ಸೈನಿಕರಂತೆ ಕಾರ್ಯನಿರ್ವಹಿಸಬೇಕು:ಸಿದ್ಧಲಿಂಗ ಮಲಶೆಟ್ಟಿ

ಕಲಬುರಗಿ: ದೇಶದ ಸದೃಢ ಹಾಗೂ ಸಂಸ್ಕಾರವಂತ ಪ್ರಜೆಗಳನ್ನು ನಿರ್ಮಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರು ಸೈನಿಕರಂತೆ ಶಿಸ್ತು, ಬದ್ಧತೆ ಮತ್ತು ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಸಿದಲಿಂಗ ಮಲಶೆಟ್ಟಿ ಹೇಳಿದರು.
ಉದನೂರು ಅಪ್ಪಾಜಿ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಗುರುಕುಲ ಸಭಾಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರು ಮತ್ತು ಮಾಜಿ ಸೈನಿಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಉತ್ತಮ ಭಾರತ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ, ಶಿಸ್ತು ಮತ್ತು ದೇಶಭಕ್ತಿಯ ಮೌಲ್ಯಗಳನ್ನು ಬೆಳೆಸಬೇಕು ಎಂದರು.
ವಿ.ಎಸ್. ಇಂಡಿ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಗುರುವಿನ ಮಾರ್ಗದರ್ಶನ ಅತ್ಯಂತ ಮುಖ್ಯ. ಗುರುಗಳ ಸರಿಯಾದ ಮಾರ್ಗದರ್ಶನ ದೊರೆತಾಗ ಮಾತ್ರ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಈರಣ್ಣ ಇಂಡಿ, ವಿದ್ಯಾರ್ಥಿಗಳ ಸಾಧನೆಗೆ ಗುರುವಿನ ಆಶೀರ್ವಾದ ಮತ್ತು ಪೆÇ್ರೀತ್ಸಾಹ ಬಹಳ ಮುಖ್ಯ. ಗುರುವಿನ ಕರುಣೆ ಹಾಗೂ ಮಾರ್ಗದರ್ಶನ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಸೂರ್ಯಕಾಂತ್ ಮಠೇಕರ್, ಅಣ್ಣಪ್ಪ ಭೀಮಶೆಟ್ಟಿ ಹಾಗೂ ಶಿವಾನಂದ ಪಾಟೀಲ್ ಮತ್ತು ಮಾಜಿ ಸೈನಿಕರಾದ ಸಿದ್ದಲಿಂಗಪ್ಪ ಆರ್. ಮಲಶೆಟ್ಟಿ ಹಾಗೂ ಅಮೃತ್ ವಿಠ್ಠಲ್ ರೇವೂರ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಸಂಸ್ಥಾಪಕ ಕಾರ್ಯದರ್ಶಿ ರಾಜಕುಮಾರ್ ಬಿ. ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಆಟೋಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ಸ್ಪೂರ್ತಿ ಮತ್ತು ಶಿವಾನಿ ನಡೆಸಿಕೊಟ್ಟರು. ಕುಮಾರಿ ಅಮೂಲ್ಯ ವಂದಿಸಿದರು.
ಕಾರ್ಯಕ್ರಮದಲ್ಲಿ ಧರ್ಮರಾಜ್ ಮಂದಾಪುರ್, ಸಿದ್ದಲಿಂಗಯ್ಯ ಸ್ಥಾವರಮಠ, ಬಸವರಾಜ್ ಇಂಗ್ಲೀಶ್ವರ್, ಸಂಸ್ಥೆಯ ಅಧ್ಯಕ್ಷೆ ಭಾಗಮ್ಮ ರಾಜಕುಮಾರ್, ಶಿಕ್ಷಕರಾದ ರಾಹುಲ್, ಶರಣು, ವೈಷ್ಣವಿ, ಶಶಿಕಲಾ, ಅಶ್ವಿನಿ, ದೀಪಾವಳಿ, ಸಾವಿತ್ರಿ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.