
ಕೋಲಾರ.ಸೆ,೯- ಅಮ್ಮನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಚತೆಗಾರರು ಸಮರ್ಪಕವಾಗಿ ಸ್ವಚ್ಚತಾ ಕಾರ್ಯ ನಿರ್ವಹಿಸುತ್ತಿಲ್ಲ. ಸ್ವಚ್ಚತಾ ಕೆಲಸಕ್ಕ ನಿಯೋಜಿಸಲಾಗಿರುವ ಸಿಬ್ಬಂದಿ ಬೇರ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು, ಗ್ರಾಮಗಳ ಸ್ವಚ್ಚತೆಗ ನಿರ್ಲಕ್ಷ್ಯ ತೋರುತ್ತಿದ್ದಾರ ಎಂದು ತಾಲ್ಲೂಕು ಗ್ಯಾರೆಂಟಿ ಸಮಿತಿ ಸದಸ್ಯ ಪಾಡಿಗಾನಹಳ್ಳಿ ಪಿ.ನವೀನ್ ಆರೋಪಿಸಿದ್ದಾರ
ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಚತೆ ಕಾಪಾಡುವಂತೆ ಹಲವು ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕ ತರಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಗ್ರಾಮಗಳಲ್ಲಿ ಕಸ ಹಾಗೂ ತ್ಯಾಜ್ಯದಿಂದ ಸಾರ್ವಜನಿಕರು ತೊಂದರ ಅನುಭವಿಸುವಂತಾಗಿದೆ ಎಂದು ದೂರಿದರು.
ಗ್ರಾಮೀಣಾ ಪ್ರದೇಶದಲ್ಲಿ ಸ್ವಚ್ಚತೆ ಮತ್ತು ನೈರ್ಮಲ್ಯಕ್ಕ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಸ್ವಚ್ಚತೆಗಾರರು ನಿಗದಿಪಡಿಸಿದ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಬೇಕು. ಅಧಿಕಾರಿಗಳು ಗ್ರಾಮಗಳಿಗ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನವೀನ್ ಒತ್ತಾಯಿಸಿದರು.
































