ಗದಗ ತಾಲೂಕಿನ ಬಿಂಕದಕಟ್ಟಿ ಸಾಲು ಮರದ ತಿಮ್ಮಕ್ಕ ಸಸ್ಯೋಧ್ಯಾನದಲ್ಲಿ ನಾಡಿನ ಅರಣ್ಯ ಸಂಪತ್ತನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಕರ್ನಾಟಕ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ದಾಂಜಲಿ ಹಾಗೂ ರಾಷ್ಟಿçÃಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್ ಅವರು ಸಸಿಗೆ ನೀರೆರೆವುದರ ಮೂಲಕ ರಾಷ್ಟಿçÃಯ ಅರಣ್ಯ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಉಪ ವಿಭಾಗಾಧಿಕಾರಿ ಗಂಗಪ್ಪ ಎಂ, ಹಿರಿಯ ದಿವಾಣಿ ನ್ಯಾಯಾಧೀಶ ಸಿ ಎಸ್ ಶಿವನಗೌಡ್ರ,ಗದಗ ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಚಂದ್ರಹಾಸ ವರ್ಣೇಕರ, ಗದಗ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹಾಂತೇಶ್ ಪೊಲೀಸ್ ಪಾಟೀಲ್, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಇತರರು ಇದ್ದರು.