
ಬೆಂಗಳೂರು,ಸೆ.೧೩-ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳಿಂದ ತನಿಖೆ ಮುಂದುವರಿದಿದ್ದು ೫ ಕೋಟಿ ರೂ ವಹಿವಾಟು ನಡೆಸಿರುವುದು ಸಿಐಡಿ ಪ್ರಾಥಮಿಕ ತನಿಖೆ ವೇಳೆ ಬೆಳಕಿಗೆ ಬಂದಿದೆ. ೮೫ ಲಕ್ಷ ಹಣ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಿರುವುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿದೆ. ಇದುವರೆಗೂ ಪ್ರಕರಣದಲ್ಲಿ ೨೭೩ ಮಂದಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ೧೫ ಅಭ್ಯರ್ಥಿಗಳು ಸೇರಿ ಕೆಲ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆ
ನಗದು ಮೂಲಕವೇ ಹೆಚ್ಚು ವ್ಯವಹಾರವಾಗಿರುವುದು ತನಿಖೆ ವೇಳೆ ಪತ್ತೆಯಾಗಿದ್ದು, ಬೀದರ್ ಸೌಹಾರ್ದ ಬ್ಯಾಂಕ್ ಮ್ಯಾನೇಜರ್ ವಿಚಾರಣೆ ಸಂದರ್ಭ, ಕನ್ನಾಳೆ ಜೊತೆಗಿನ ವ್ಯವಹಾರದ ಬಗ್ಗೆ ಅವರು ತಪ್ಪೊಪ್ಪಿಕೊಂಡಿದ್ದಾರೆ.
ಉಳಿದಂತೆ ಶಾಂತ ಹೊಸಮನಿ ವಿಚಾರಣೆಗೆ ಬಾರದ ಹಿನ್ನಲೆ ಅವರಿಗೆ ಮತ್ತೊಮ್ಮೆ ನೋಟಿಸ್ ಕೊಡಲು ಸಿಐಡಿ ತಯಾರಿ ಮಾಡಿಕೊಂಡಿದೆ. ಪ್ರಕರಣ ಸಂಬಂಧ ಈಗಾಗಲೇ ಐಎಎಸ್? ಅಧಿಕಾರಿ ಜ್ಞಾನೇಂದ್ರ ವಿಚಾರಣೆ ನಡೆಸಿರುವ ಅಧಿಕಾರಿಗಳು, ಅವರ ಜೊತೆಗಿದ್ದ ಯುವತಿ ಬಳಿಯಿದ್ದ ೨೩ ಲಕ್ಷದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಆರೋಪಿ ಬಸವರಾಜ್ ಕನ್ನಾಳೆ ಸಹಚರರಿಗೂ ಬಲೆ ಬೀಸಿರುವ ಸಿಐಡಿ, ಪ್ರಕರಣ ಸಂಬಂಧ ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆಯಿದೆ.
ಶಾಂತ ಹೊಸಮನಿ ಎಡವಟ್ಟು:
ಕೆಪಿಎಸ್ಸಿಯ ೩ ನೇಮಕಾತಿಯಲ್ಲೂ ಶಾಂತ ಹೊಸಮನಿ ಎಡವಟ್ಟು ಮಾಡಿಕೊಂಡಿದ್ದು, ಆರ್ ಡಬ್ಲ್ಯೂ ಡಿ ಇಲಾಖೆ ಎಇಇ ಅಕ್ರಮದಲ್ಲೂ ಶಾಂತಾ ಹೆಸರು ತಳಕುಹಾಕಿಕೊಂಡಿದೆ. ೨೦೨೩ರಲ್ಲಿ ಎಇಇ ಅಕ್ರಮ ತನಿಖೆಗೆ ಉಪ ಸಮಿತಿ ನೇಮಿಸಲಾಗಿತ್ತು. ಆದರೆ ಸದಸ್ಯರಿಗೆ ತಿಳಿಸಿದೆ ಆಯ್ಕೆ ಪಟ್ಟಿ ಪ್ರಕಟಿಸಲು ಶಾಂತ ಹೊಸಮನಿ ಮುಂದಾಗಿದ್ದರು. ಆಗಿನ ಕಾರ್ಯದರ್ಶಿ ಲತಾ ಕುಮಾರಿ ಮೂಲಕ ಪ್ರಕಟಣೆಗೆ ಮುಂದಾಗಿದ್ದರು. ಆದರೆ ಕೆಲ ಸದಸ್ಯರ ಆಕ್ಷೇಪದಿಂದ ಪಟ್ಟಿ ಪ್ರಕಟವಾಗಿರಲಿಲ್ಲ. ಬಳಿಕ ಉಪ ಸಮಿತಿಯಿಂದ ಶಾಂತ ಹೊಸಮನಿ ಹೊರಗಿಡಲಾಗಿತ್ತು ಎನ್ನುವುದು ಬಹಿರಂಗಗೊಂಡಿದೆ.
































